ರಾಮನಗರ ಕ್ಷೇತ್ರವನ್ನು ಕೈಬಿಟ್ಟ ಎಚ್.ಡಿ.ಕುಮಾರಸ್ವಾಮಿ

Update: 2018-05-19 12:55 GMT

ಬೆಂಗಳೂರು, ಮೇ 19: ವಿಧಾನಸಭಾ ಚುನಾವಣೆಯಲ್ಲಿ ಚನ್ನಪಟ್ಟಣ ಮತ್ತು ರಾಮನಗರ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ, ರಾಮನಗರ ಕ್ಷೇತ್ರವನ್ನು ಕೈ ಬಿಟ್ಟು, ಚನ್ನಪಟ್ಟಣ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ.

ಶನಿವಾರ ವಿಧಾನಸಭೆಯಲ್ಲಿ ಕುಮಾರಸ್ವಾಮಿ, ಚನ್ನಪಟ್ಟಣ ಕ್ಷೇತ್ರದ ಶಾಸಕನಾಗಿ ಪ್ರಮಾಣ ವಚನ ಸ್ವೀಕರಿಸಿದರು. ಈ ಬಾರಿಯ ಚುನಾವಣೆಯಲ್ಲಿ ರಾಮನಗರದಲ್ಲಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದ ಕುಮಾರಸ್ವಾಮಿ, ಚನ್ನಪಟ್ಟಣದಲ್ಲಿ ಸಿ.ಪಿ.ಯೋಗೀಶ್ವರ್ ಎದುರು ತೀವ್ರ ಪೈಪೋಟಿ ಎದುರಿಸಿ ವಿಜಯಿಯಾಗಿದ್ದರು.

ರಾಮನಗರ ಕ್ಷೇತ್ರವು ಜೆಡಿಎಸ್ ಪಕ್ಷದ ಭದ್ರಕೋಟೆಯಾಗಿರುವುದರಿಂದ, ಆ ಕ್ಷೇತ್ರಕ್ಕೆ ನಡೆಯುವ ಉಪ ಚುನಾವಣೆಯಲ್ಲಿ ಪತ್ನಿ ಅನಿತಾ ಕುಮಾರಸ್ವಾಮಿ ಅಥವಾ ಪಕ್ಷದ ಸಾಮಾನ್ಯ ಕಾರ್ಯಕರ್ತರನ್ನು ನಿಲ್ಲಿಸಿ ಸುಲಭವಾಗಿ ಗೆಲ್ಲಿಸಿಕೊಂಡು ಬರುವುದು ಕುಮಾರಸ್ವಾಮಿಯ ಲೆಕ್ಕಾಚಾರವಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News