ಅಸೈಗೋಳಿಯಲ್ಲಿ ಉಳ್ಳಾಲ ವಲಯದ ಬಂಟರ ಭವನ ಉದ್ಘಾಟನೆ
ಕೊಣಾಜೆ, ಮೇ 19: ಬಂಟರ ಸಂಘ ಉಳ್ಳಾಲ ವಲಯದ ಆಶ್ರಯದಲ್ಲಿ ಕೊಣಾಜೆ ಅಸೈಗೋಳಿಯಲ್ಲಿ ಸುಮಾರು ಮೂರು ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ನೂತನ "ಬಂಟರ ಭವನ’ದ ಉದ್ಘಾಟನಾ ಸಮಾರಂಭವು ಶನಿವಾರ ನಡೆಯಿತು.
ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಮುಂಬಯಿ ಬಂಟರ ಸಂಘದ ಅ ್ಯಕ್ಷ ಪದ್ಮನಾಭ ಪಯ್ಯಡೆ ಅವರು ಶೈಕ್ಷಣಿಕವಾಗಿ ಬಲಿಷ್ಠರಾಗು ವುದರೊಂದಿಗೆ ತಲೆತಲಾಂತರದಿಂದ ಪಾಲಿಸಿಕೊಂಡ ಬಂದಿರುವ ಉತ್ತಮ ಸಂಪ್ರದಾಯ ಸಂಸ್ಕತಿಯ ಪಾಲನೆಯೊಂದಿಗೆ ಬಂಟ ಸಮಾಜವು ಸಮಾಜದ ಅಭಿವೃದ್ಧಿಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.
ನೂತನ ಬಂಟರ ಭವನದ ಮೂಲಕ ಬಂಟರ ಸಂಘ ಉಳ್ಳಾಲ ವಲಯ ಸಮಾಜಕ್ಕೆ ಬಹುದೊಡ್ಡ ಕೊಡುಗೆ ನೀಡಿದಂತಾಗಿದೆ. ಈ ಕನಸಿನ ಕಟ್ಟಡದಲ್ಲಿ ಬಹಳಷ್ಟು ಕಾರ್ಯಕ್ರಮಗಳು ನಡೆಯಲಿ. ಉಳ್ಳಾಲ ವಲಯದ ಎಲ್ಲ ಸಮಾಜ ಬಾಂಧವರು ಏಕ ಮನಸ್ಸಿನಿಂದ ಸಮಾಜದ ಅಭಿವೃದ್ಧಿಗೆ ಸಹಕರಿಸುವ ಮೂಲಕ ಮಾದರಿ ವಲಯವಾಗಿ ಮೂಡಿ ಬರಲಿ ಎಂದು ಆಶಿಸಿದರು.
ನಾಮಪಲಕ ಅನಾವರಣ ಮಾಡಿದ ಮಂಗಳೂರಿನ ಬಂಟರ ಯಾನೆ ನಾಡವರ ಮಾತೃಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಬಂಟರ ಸಂಘ ಸತ್ಸಂಗ. ಬಂಟ ಸಮಾಜ ಬಾಂಧವರು ಸಮಾಜದ ಎಲ್ಲ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ನೋಡಿಕೊಳ್ಳಬೇಕು. ಬಂಟ ಸಮಾಜ ಮಾತೃ ಸಂಘದಿಂದ ಮುಂದಿನ ದಿನಗಳಲ್ಲಿ ಬಹಳಷ್ಟು ಸಮಾಜಮುಖಿ ಕಾರ್ಯಕ್ರಮಗಳು ನಡೆಯಲಿದ್ದು ಬಂಟ ಸಮಾಜ ಬಾಂಧವರು ಧನ ಸಹಾಯದ ಜೊತೆಗೆ ಮಾನಸಿಕವಾದ ಸಹಾಯವನ್ನು ನೀಡಬೇಕು ಎಂದು ಹೇಳಿದರು.
ಭೋಜನ ಶಾಲೆ ಉದ್ಘಾಟಿಸಿದ ಆ್ಯಡ್‌ಲ್ಯಾಬ್ಸ್ ಆಡಳಿತ ನಿರ್ದೇಶಕ ಮಾತನಾಡಿ ನೂತನ ಭವನ ಕ್ಷಿಪ್ರಗತಿಯಲ್ಲಿ ನಿರ್ಮಾಣಗೊಂಡು ಉದ್ಘಾಟನೆ ಭಾಗ್ಯ ಕಂಡಿದ್ದು ನಿಜ್ಕೂ ಸಮಾಜ ಬಾಂಧವರ ಒಗ್ಗಟ್ಟನ್ನು ತೋರಿಸುತ್ತದೆ ಎಂದರು.
ಮಂಗಳೂರಿನ ಶ್ರೀ ದೇವಿ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎ. ಸದಾನಂದ ಶೆಟ್ಟಿ ಬಂಟೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದರು.
ಜಾಗತಿಕ ಬಂಟರ ಸಂಘಗಳ ಒಕ್ಕೂಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಬಂಟರ ಸಂಘ ಉಳ್ಳಾಲ ವಲಯದ ಲಾಂಛನ ಬಿಡುಗಡೆಗೊಳಿಸಿದರು.
ಬಂಟರ ಭವನ ಕಟ್ಟಡ ನಿರ್ಮಾಣ ಸಮಿತಿ ಅಧ್ಯಕ್ಷ ವಿವೇಕ್ ಶೆಟ್ಟಿ ಬೊಲ್ಯಗುತ್ತು ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿಬಾಲಿವುಡ್ ನಟ ಸುನಿಲ್ ಶೆಟ್ಟಿ, ಸಂಸದ ನಳಿನ್ ಕುಮಾರ್ ಕಟೀಲು, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಸಂತೋಷ್ ಕುಮಾರ್ ರೈ ಬೋಳಿಯಾರ್, ಪುಣೆ ಬಂಟರ ಸಂಘದ ಅಧ್ಯಕ್ಷ ಸಂತೋಷ್ ಶೆಟ್ಟಿ, ಯುಎಇ ಎಕ್ಸ್‌ಚೇಂಜ್ ಅಧ್ಯಕ್ಷ ಸುಧೀರ್ ಶೆಟ್ಟಿ, ಪುಣೆ ಹೋಟೆಲ್ ಉದ್ಯಮಿ ಪದ್ಮನಾಭ ಶೆಟ್ಟಿ, ಮಾಜಿ ಶಾಸಕ ಕೆ. ಜಯರಾಮ ಶೆಟ್ಟಿ ಹಾಗೂ ಕೊಣಾಜೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಶೌಕತ್ ಅಲಿ ಉಪಸ್ಥಿತರಿದ್ದರು.
ಬಂಟರ ಸಂಘ ಉಳ್ಳಾಲ ವಲಯ ಅಧ್ಯಕ್ಷ ಜಿತೇಂದ್ರ ಶೆಟ್ಟಿ ತಲಪಾಡಿ ಗುತ್ತು ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ನವನೀತ ಶೆಟ್ಟಿ ಕದ್ರಿ ಕಾರ್ಯಕ್ರಮ ನಿರೂಪಿಸಿದರು. ಕಟ್ಟಡ ನಿರ್ಮಾಣ ಸಮಿತಿ ಪ್ರಧಾನ ಕಾರ್ಯದರ್ಶಿ ಕೆ. ರವಿೀಂದ್ರ ರೈ ಹರೇಕಳ ವಂದಿಸಿದರು. ಬಳಿಕ ಸಾಂಸ್ಕೃತಿಕ ಮನರಂಜನೆ ಕಾರ್ಯಕ್ರಮ ನಡೆಯಿತು.