ಚಿಕ್ಕಮಗಳೂರು: ಜೆಡಿಎಸ್ ಕಾರ್ಯಕರ್ತರಿಂದ ವಿಜಯೋತ್ಸವ

Update: 2018-05-19 13:56 GMT

ಚಿಕ್ಕಮಗಳೂರು,ಮೇ.19: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರ ಬಹುಮತ ಸಾಬೀತು ಪಡಿಸುವಲ್ಲಿ ವಿಫಲವಾಗಿ ಮೈತ್ರಿ ಸರ್ಕಾರ ರಚನೆಗೆ ಅವಕಾಶ ದೊರೆತ ಹಿನ್ನೆಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ನಗರದಲ್ಲಿ ಶನಿವಾರ ವಿಜಯೋತ್ಸವ ಆಚರಿಸಿದರು.

ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪ ಅವರು ರಾಜೀನಾಮೆ ಸಲ್ಲಿಸಿದ ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೆ ಜೆಡಿಎಸ್ ಕಚೇರಿ ಎದುರು ಜಮಾಯಿಸಿದ ಕಾರ್ಯಕರ್ತರು ಹನುಮಂತಪ್ಪ ವೃತ್ತದ ಬಳಿ ಪಟಾಕಿ ಸಿಡಿಸಿ ಸಂಭ್ರಮಿಸಿದರು.

ನಂತರ ಎಂ.ಜಿ.ರಸ್ತೆಯಲ್ಲಿ ಬೈಕ್ ಜಾಥಾ ನಡೆಸಿದ ಕಾರ್ಯಕರ್ತರು ಹೊಸಮನೆ ಬಡಾವಣೆಯ ವೃತ್ತದ ಬಳಿ ಪಟಾಕಿ ಸಿಡಿಸಿ ಪಕ್ಷದ ಪರ ಘೋಷಣೆ ಕೂಗಿದರು.

ಈ ವೇಳೆ ಜೆಡಿಎಸ್ ಪ.ಜಾತಿ/ಪ.ವಿಭಾಗದ ಜಿಲ್ಲಾಧ್ಯಕ್ಷ ಆರ್.ದೇವೀಪ್ರಸಾದ್, ಕಾರ್ಮಿಕ ವಿಭಾಗದ ಅಧ್ಯಕ್ಷ ಮಾನು ಮಿರಾಂಡ, ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಕಾರ್ಯದರ್ಶಿ ದೇವರಾಜ್ ಅರಸ್ ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News