ಯುವ ವಿಜ್ಞಾನಿ ಪ್ರಶಸ್ತಿಗೆ ಅರ್ಜಿ ಆಹ್ವಾನ

Update: 2018-05-19 15:08 GMT

ಬೆಂಗಳೂರು, ಮೇ 19: ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಪ್ರಸ್ತುತ ಸಾಲಿನ ಯುವ ವಿಜ್ಞಾನಿ ಪ್ರಶಸ್ತಿಗಾಗಿ 9 ರಿಂದ 12ನೇ ವರ್ಗದಲ್ಲಿ ಓದುತ್ತಿರುವ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ವೈಜ್ಞಾನಿಕ ವಿಧಾನದ ಮನವರಿಕೆ ಮಾಡುವುದು, ಭವಿಷ್ಯದ ವಿಜ್ಞಾನಿಗಳನ್ನಾಗಿ ರೂಪಿಸುವುದು, ರಾಜ್ಯ-ರಾಷ್ಟ್ರದ ವೈಜ್ಞಾನಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಅವಕಾಶ ನೀಡುವುದು, ಮೂಲ ವಿಜ್ಞಾನ ವಿಷಯಗಳಲ್ಲಿ ಆಸಕ್ತಿ ಹಾಗೂ ಚಿಂತನ ಕೌಶಲ್ಯವನ್ನು ವರ್ಧಿಸಬೇಕೆಂಬ ಉದ್ದೇಶದಿಂದ ಪ್ರಶಸ್ತಿ ನೀಡಲಾಗುತ್ತಿದೆ.

ಆಸಕ್ತ ವಿದ್ಯಾರ್ಥಿಗಳು ಬೆಂಗಳೂರಿನ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಕೇಂದ್ರ ಕಚೇರಿಗೆ ಭೇಟಿ ನೀಡಿ ಅಥವಾ www.krvp.org ವೆಬ್‌ಸೈಟ್ ಮೂಲಕ ಜೂ.14 ರೊಳಗಾಗಿ ತಮ್ಮ ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆ, ಉಪ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು.

ಜೂ.23ರಂದು ಜಿಲ್ಲಾ ಮಟ್ಟದ ಸ್ಪರ್ಧೆ ಏಕಕಾಲದಲ್ಲಿ ಆಯೋಜಿಸಲಾಗುವುದು. ಜಿಲ್ಲಾ ಮಟ್ಟದಲ್ಲಿ ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದ ಯುವ ವಿಜ್ಞಾನಿಗಳು ರಾಜ್ಯ ಮಟ್ಟದ ಯುವ ವಿಜ್ಞಾನಿಗಳ ಸಮಾವೇಶದಲ್ಲಿ ಭಾಗವಹಿಸಲು ಅರ್ಹತೆ ಪಡೆಯುತ್ತಾರೆ.

ಆಸಕ್ತ ವಿದ್ಯಾರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಕರಾಪ ಕಚೇರಿ ದೂರವಾಣಿ 080 26718939, ಮೊಬೈಲ್ ಸಂಖ್ಯೆ 94835 49159, 90084 42557, 9449 530245 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News