ಬ್ರಹ್ಮರಕೂಟ್ಲು: ಲಾರಿ ಢಿಕ್ಕಿ; ಬೈಕ್ ಸವಾರ ಮೃತ್ಯು

Update: 2018-05-20 04:15 GMT
ಇಕ್ಬಾಲ್

ಬಂಟ್ವಾಳ, ಮೇ 19: ಟಿಪ್ಪರ್ ಲಾರಿವೊಂದು ಬೈಕ್ ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟು, ಸಹ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬ್ರಹ್ಮರಕೂಟ್ಲು ಟೋಲ್ ಗೇಟ್ ಬಳಿ ಶನಿವಾರ ರಾತ್ರಿ ಸಂಭವಿಸಿದೆ.

ಇಲ್ಲಿನ ಪರ್ಲಿಯಾ ನಿವಾಸಿ ಇಕ್ಬಾಲ್ (38) ಮೃತ ಬೈಕ್ ಸವಾರ ಎಂದು ಗುರುತಿಸಲಾಗಿದೆ. ಬಶೀರ್ (30) ಗಾಯಗೊಂಡರು ಎಂದು ತಿಳಿದುಬಂದಿದೆ. ಇವರಿಬ್ಬರು ಬೈಕ್ ನಲ್ಲಿ ಮಂಗಳೂರು ಕಡೆ ಹೋಗುತ್ತಿದ್ದ ವೇಳೆ ಹಿಂದಿನಿಂದ ವೇಗವಾಗಿ ಹಾಗೂ ಅಜಾಗರೂಕತೆಯಿಂದ ಬಂದ ಟಿಪ್ಪರ್ ಲಾರಿ ಬ್ರಹ್ಮರಕೂಟ್ಲು ಟೋಲ್ ಬಳಿ ಬೈಕ್ ಗೆ ಢಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರಿಬ್ಬರು ರಸ್ತೆಗೆ ಎಸೆಯಲ್ಪಟ್ಟು ಈ ಪೈಕಿ ಇಕ್ಬಾಲ್ ಅವರ ಮೇಲೆ ಲಾರಿ ಹರಿದ ಪರಿಣಾಮ ಅವರು ಗಂಭೀರ ಗಾಯಗೊಂಡು ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಬಂಟ್ವಾಳ ನಗರ ಠಾಣೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News