ಪಿಒಪಿ ಗಣೇಶ ವಿಗ್ರಹ ತಯಾರಿಸದಂತೆ ರಾಜ್ಯ ಮಾಲಿನ್ಯ ಮಂಡಳಿ ಅಧಿಸೂಚನೆ

Update: 2018-05-19 16:02 GMT

ಬೆಂಗಳೂರು, ಮೇ 19: ಜಲ ಮಾಲಿನ್ಯ ತಡೆಗಟ್ಟುವ ಉದ್ದೇಶದಿಂದ ರಾಜ್ಯಾದ್ಯಂತ ಪಿಒಪಿ ಗಣೇಶ ವಿಗ್ರಹಗಳನ್ನು ತಯಾರಿಸದಂತೆ ರಾಜ್ಯ ಮಾಲಿನ್ಯ ಮಂಡಳಿಯು ಅಧಿಸೂಚನೆ ಹೊರಡಿಸಿದೆ.

ಹಿಂದಿನ ವರ್ಷ ಹಲವು ಹಂತಗಳಲ್ಲಿ ಜಾಗೃತಿ ಮೂಡಿಸದ ಪರಿಣಾಮ ನಿರೀಕ್ಷೆಗೂ ಮೀರಿ ಪಿಒಪಿ ವಿಗ್ರಹಗಳ ತಯಾರಿಕೆ ಕಡಿತಗೊಂಡಿತ್ತು. ಆದರೆ, ಈ ಬಾರಿ ರಾಜ್ಯದ ಹಲವು ಸ್ಥಳಗಳಲ್ಲಿ ಪಿಒಪಿ ಗಣೇಶಗಳ ತಯಾರಿಕೆಯಲ್ಲಿ ತೊಡಗಿಕೊಂಡಿರುವ ಸಂಬಂಧ ದೂರುಗಳು ಬಂದಿವೆ. ಇದನ್ನು ತಡೆಗಟ್ಟುವ ಸಲುವಾಗಿ ಮಂಡಳಿ ಅಧ್ಯಕ್ಷ ಲಕ್ಷ್ಮಣ್ ಹಾಗೂ ಬಿಬಿಎಂಪಿ ಪಾಲಿಕೆ ಆಯುಕ್ತರು ಮತ್ತು ಎಲ್ಲ ಜಿಲ್ಲಾಧಿಕಾರಿಗಳಿಗೆ ಸುತ್ತೋಲೆ ಕಳುಹಿಸಲಾಗಿದೆ. ನಿಯಮ ಉಲ್ಲಂಘಿಸಿ ಪಿಒಪಿ ಗಣೇಶಗಳ ತಯಾರಿಕೆಯಲ್ಲಿ ತೊಡಗಿಕೊಂಡಿರುವುದು ಕಂಡು ಬಂದರೆ ಕಾನೂನು ಕ್ರಮಕೈಗೊಳ್ಳಲು ಸೂಚನೆ ಕೈಗೊಳ್ಳಲಾಗುತ್ತದೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News