ರಾಷ್ಟ್ರೀಯ ಪ್ರಶಸ್ತಿಗೆ ಅರ್ಜಿ ಆಹ್ವಾನ

Update: 2018-05-19 16:03 GMT

ಬೆಂಗಳೂರು, ಮೇ 19: ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಸಂಸ್ಥೆಗಳಿಗೆ ಹಾಗೂ ವೈಯಕ್ತಿಕ ರಾಷ್ಟ್ರೀಯ ಪ್ರಶಸ್ತಿಗೆ ಕೇಂದ್ರ ಸರಕಾರವು ಅರ್ಜಿ ಆಹ್ವಾನಿಸಲಾಗಿದೆ.

ಹಿರಿಯ ನಾಗರಿಕರು ಹಾಗೂ ಹಿರಿಯ ನಾಗರಿಕ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಂಸ್ಥೆಗಳು ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಆಂಗ್ಲಭಾಷೆಯಲ್ಲಿ ಪೂರಕ ದಾಖಲಾತಿಗಳೊಡನೆ ಸಂಬಂಧಿಸಿದ ಜಿಲ್ಲೆಗಳ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳಿಗೆ ಮೇ 25ರೊಳಗೆ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಆಯಾ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ಅಥವಾ ಪ್ರಧಾನ ಕಚೇರಿ ದೂರವಾಣಿ ಸಂಖ್ಯೆ 080 22860907 ಅನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News