ತೆಕ್ಕಟ್ಟೆ: ಟಯರ್‌ಗೆ ಬೆಂಕಿ ಹಚ್ಚಿ ಬಿಜೆಪಿ ಪ್ರತಿಭಟನೆ

Update: 2018-05-19 17:10 GMT

ಕುಂದಾಪುರ, ಮೇ 19: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜೀ ನಾಮೆ ನೀಡಿರುವ ಹಿನ್ನೆಲೆಯಲ್ಲಿ ತೆಕ್ಕಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರು ರಸ್ತೆಯಲ್ಲಿ ಟಯರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಸ್ಥಳಕ್ಕೆ ಆಗಮಿಸಿದ ಪೊಲೀಸರು ಟಯರ್‌ನ್ನು ತೆರವು ಗೊಳಿಸಿದರು. ಈ ವೇಳೆ ಬಿಜೆಪಿ ಕಾರ್ಯಕರ್ತರು ಹಾಗೂ ಪೊಲೀಸರ ಮಧ್ಯೆ ಮಾತಿನ ಚಕಮಕಿ ನಡೆಯಿತು.

ಇದೇ ವೇಳೆ ಜೆಡಿಎಸ್ ಕಾರ್ಯಕರ್ತರು ಕೂಡ ತೆಕ್ಕಟ್ಟೆಯಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿದರು. ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News