ಮಧ್ಯಪ್ರದೇಶ: ಅಂಬೇಡ್ಕರ್ ಪ್ರತಿಮೆಗೆ ಹಾನಿ

Update: 2018-05-19 17:17 GMT

ಮೊರೇನಾ, ಮೇ 19: ಮಧ್ಯಪ್ರದೇಶದ ಮೊರೇನಾ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ಹಾಗೂ ಶನಿವಾರದ ನಡುವೆ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಅಪರಿಚಿದ ದುಷ್ಕರ್ಮಿಗಳು ಹಾನಿ ಎಸಗಿದ್ದಾರೆ. ಈ ಹಿನ್ನೆಲೆಯಲ್ಲಿ ಇಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ.

ಜೌರಾ ಪೊಲೀಸ್ ಠಾಣೆ ಪ್ರದೇಶದ ವ್ಯಾಪ್ತಿಯ ಕೈಮ್ರಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಅಂಬೇಡ್ಕರ್ ಅವರ ಪ್ರತಿಮೆ ಹಾನಿಗೊಂಡಿರುವುದು ಬೆಳಕಿಗೆ ಬಂದ ಬಳಿಕ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದರು. ಕೂಡಲೇ ಹಿರಿಯ ಪೊಲೀಸ್ ಅಧಿಕಾರಿಗಳು ಆರೋಪಿಗಳ ಪತ್ತೆಗೆ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ ಹಾಗೂ ಅನಾಮಿಕ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

 ಈ ನಡುವೆ ಅಂಬೇಡ್ಕರ್ ಅವರ ಪ್ರತಿಮೆಗೆ ಹಾನಿ ಮಾಡಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನಕಾರರನ್ನು ಅವರು ಸಮಾಧಾನಗೊಳಿಸಿದರು ಹಾಗೂ ಆರೋಪಿಗಳನ್ನು ಕೂಡಲೇ ಬಂಧಿಸಲಾಗುವುದು ಎಂದು ಭರವಸೆ ನೀಡಿದರು. ಎಪ್ರಿಲ್ 2ರಂದು ಕರೆ ನೀಡಿದ್ದ ಭಾರತ್ ಬಂದ್ ಬಳಿಕ ಗ್ವಾಲಿಯರ್, ಮೊರೇನಾ ಹಾಗೂ ಭಿಂದ್‌ನಲ್ಲಿ ಅಂಬೇಡ್ಕರ್ ಅವರ ಹಲವು ಪ್ರತಿಮೆಗಳಿಗೆ ಹಾನಿ ಮಾಡಲಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News