ಬೆಂಗಳೂರು: ಮಾರಕಾಸ್ತ್ರಗಳಿಂದ ಇರಿದು ಯುವಕನ ಕೊಲೆ

Update: 2018-05-20 12:56 GMT

ಬೆಂಗಳೂರು, ಮೇ 20: ಕ್ಷುಲ್ಲಕ ಕಾರಣಕ್ಕೆ ಯುವಕನೊಬ್ಬನನ್ನು ಮಾರಕಾಸ್ತ್ರಗಳಿಂದ ಇರಿದು ಕೊಲೆಗೈದಿರುವ ದುರ್ಘಟನೆ ಇಲ್ಲಿನ ಆಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ರಾಜೇಂದ್ರ ನಗರದ ಎಲ್‌ಆರ್‌ನಗರ ಬಡಾವಣೆಯ ಝಾವಿದ್(19) ಕೊಲೆಯಾಗಿರುವ ಯುವ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ವಿವರ: ಮೆಕ್ಯಾನಿಕ್ ಕೆಲಸ ಮಾಡುತ್ತಿದ್ದ ಝಾವಿದ್ ರಾತ್ರಿ ಊಟ ಮುಗಿಸಿ ಮನೆಯಿಂದ ಹೊರಗೆ ಬಂದಿದ್ದು, ಆತನನ್ನು ಕಂಡ ಮೂವರು ಸ್ನೇಹಿತರು ತಮ್ಮ ಜೊತೆ ಬರುವಂತೆ ಕರೆದಿದ್ದಾರೆ. ಈ ವೇಳೆ ವಿರೋಧ ವ್ಯಕ್ತಪಡಿಸಿದ ಕಾರಣ ಜಗಳ ನಡೆದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆಗೈದು ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಗಂಭೀರವಾಗಿ ಗಾಯಗೊಂಡಿದ್ದ ಝಾವಿದ್‌ನನ್ನು ನೋಡಿದ ಸ್ಥಳೀಯರು ಕೂಡಲೇ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದು ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಹೋಗುವ ದಾರಿಯ ಮಧ್ಯೆದಲ್ಲೇ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಪ್ರಕರಣ ಸಂಬಂಧ ಮೊಕದ್ದಮೆ ದಾಖಲಿಸಿಕೊಂಡಿರುವ ಆಡುಗೋಡಿ ಠಾಣಾ ಪೊಲೀಸರು, ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News