ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ: ಯುವಕನಿಂದ ದೂರು
Update: 2018-05-20 19:54 IST
ಕಡಬ, ಮೇ 20: ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಯುವಕನೋರ್ವ ಕಡಬ ಠಾಣೆಗೆ ದೂರು ನೀಡಿದ್ದಾರೆ.
ಪುತ್ತೂರಿನ ಖಾಸಗಿ ಕಾಲೇಜು ವಿದ್ಯಾರ್ಥಿ, ಕುಂತೂರು ಗ್ರಾಮದ ಮುಡಿಪಿನಡ್ಕ ನಿವಾಸಿ ಮಹಮ್ಮದ್ ನಿಝಾರ್ ಎಂಬವರ ಫೋಟೊದೊಂದಿಗೆ ಪ್ರಚೋದನಕಾರಿ ಆಡಿಯೊ ಸಂದೇಶವೊಂದು ವಾಟ್ಸ್ಆ್ಯಪ್ ಗ್ರೂಪ್‌ಗಳಲ್ಲಿ ಹರಿದಾಡುತ್ತಿರುವುದನ್ನು ಕಂಡು ಆತಂಕಗೊಂಡು ಕಡಬ ಪೊಲೀಸರಿಗೆ ದೂರು ನೀಡಿದ್ದಾರೆ.
ತಾನು ನಿರಪರಾಧಿಯಾಗಿದ್ದು, ಈ ಪ್ರಚೋದನಕಾರಿ ಸಂದೇಶಕ್ಕೂ ತನಗೂ ಯಾವುದೇ ಸಂಬಂಧವಿರುವುದಿಲ್ಲವಾದುದರಿಂದ ಈ ಪ್ರಕರಣವನ್ನು ಬೆಳಕಿಗೆ ತಂದು ತಪ್ಪಿತಸ್ಥರಿಗೆ ಸೂಕ್ತ ಶಿಕ್ಷೆಯಾಗಬೇಕೆಂದು ದೂರಿನಲ್ಲಿ ತಿಳಿಸಲಾಗಿದೆ.