×
Ad

ಚಿಕ್ಕಮಗಳೂರು: ವಿಶ್ವಾಸ ಮತಯಾಚಿಸದೆ ಸಿಎಂ ರಾಜಿನಾಮೆ; ವಿವಿಧೆಡೆ ಸಂಭ್ರಮಾಚರಣೆ

Update: 2018-05-20 20:11 IST

ಚಿಕ್ಕಮಗಳೂರು,ಮೇ.20: ವಿಶ್ವಾಸ ಮತಯಾಚಿಸುವಲ್ಲಿ ವಿಫಲರಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಶನಿವಾರ ಹಿರೇಮಗಳೂರು ಸೇರಿದಂತೆ ವಿವಿಧ ಕಡೆಗಳಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಿಸಿದರು.

ಶನಿವಾರ ಸಂಜೆ ವಿಧಾನ ಪರಿಷತ್ ಮಾಜಿ ಶಾಸಕಿ ಎ.ವಿ.ಗಾಯತ್ರಿ ಶಾಂತೇಗೌಡ ಅವರ ನಿವಾಸದ ಎದುರು ಸಮಾವೇಶಗೊಂಡ ಕಾಂಗ್ರೆಸ್‍ನ ಅನೇಕ ಕಾರ್ಯಕರ್ತರು ಪಟಾಕಿ ಸಿಡಿಸಿ ಘೋಷಣೆಗಳನ್ನು ಕೂಗಿ ಸಿಹಿ ಹಂಚಿ ಸಂಭ್ರಮಿಸಿದರು. 

ಈ ಸಂದರ್ಭದಲ್ಲಿ ಮಾಜಿ ಶಾಸಕಿ ಎ.ವಿ.ಗಾಯತ್ರಿ ಶಾಂತೇಗೌಡ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಕೆ.ಎಸ್.ಶಾಂತೇಗೌಡ, ಕೆಪಿಸಿಸಿ ಕಿಸಾನ್ ಸೆಲ್ ರಾಜ್ಯ ಸಂಚಾಲಕ ಸಿ.ಎನ್.ಅಕ್ಮಲ್, ಜಿಲ್ಲಾ ಕಾರ್ಮಿಕ ವಿಭಾಗ ಅಧ್ಯಕ್ಷ ನಯಾಜ್, ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರ ಪ್ರಚಾರ ಸಮಿತಿ ಅಧ್ಯಕ್ಷ ಹಿರೇಮಗಳೂರು ಪುಟ್ಟಸ್ವಾಮಿ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಶದಾಬ್, ಎಚ್.ಟಿ.ವೆಂಕಟೇಶ್, ನಗರಸಭೆ ಸದಸ್ಯ ಯತಿರಾಜ್ ನಾಯ್ಡು, ಎಸ್ಸಿ ಸೆಲ್ ನಗರ ಅಧ್ಯಕ್ಷ ಎಚ್.ಎಸ್.ಜಗದೀಶ್, ಹೋಬಳಿ ಕಾಂಗ್ರೆಸ್ ಅಧ್ಯಕ್ಷ ನೆಟ್ಟೇಕೆರೆಹಳ್ಳಿ ನಾಗೇಶ್, ಹೋಬಳಿ ಯುವ ಕಾಂಗ್ರೆಸ್ ಅಧ್ಯಕ್ಷ ಮಧು ಸೇರಿದಂತೆ ಭಾಗವಹಿಸಿದ್ದರು.

ಹಿರೇಮಗಳೂರಿನಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್‍ನ ನೂರಾರು ಕಾರ್ಯಕರ್ತರು ಸಮಾವೇಶಗೊಂಡು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರು ಹಿರೇಮಗಳೂರಿನ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಪಟಾಕಿ ಸಿಡಿಸಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಮಾಜಿ ಶಾಸಕಿ ಎ.ವಿ.ಗಾಯತ್ರಿ ಶಾಂತೇಗೌಡ ಮಾತನಾಡಿ, ವಾಮಮಾರ್ಗದಲ್ಲಿ ಅಧಿಕಾರಿ ಹಿಡಿಯಲು ಬಿಜೆಪಿ ನಡೆಸಿದ ಶತ ಪ್ರಯತ್ನ ವಿಫಲವಾಗಿದೆ. ಈ ದೇಶದಲ್ಲಿ ಅಸಂವಿಧಾನಿಕ ಚಟುವಟಿಕೆಗಳಿಗೆ ಅವಕಾಶ ಇಲ್ಲ ಎಂಬುದು ಈ ಪ್ರಕರಣದಿಂದ ಸಾಬೀತಾಗಿದೆ. ಬಿಜೆಪಿಯನ್ನು ಅಧಿಕಾರಕ್ಕೆ ತರಲು ಅಸಂವಿಧಾನಿಕ ಕ್ರಮಗಳನ್ನು ಕೈಗೊಂಡ ರಾಜ್ಯಪಾಲರು ರಾಜೀನಾಮೆ ನೀಡುವ ಮೂಲಕ ಆ ಸ್ಥಾನದ ಪಾವಿತ್ರ್ಯತೆಯನ್ನು ಉಳಿಸಬೇಕು. ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್‍ಗೆ ಸಂದಿರುವ ಜಯ ಇದಾಗಿದೆ ಎಂದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಎಸ್.ಶಾಂತೇಗೌಡ, ನಗರಸಭೆ ಸದಸ್ಯ ಹಿರೇಮಗಳೂರು ಪುಟ್ಟಸ್ವಾಮಿ, ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ವಿಭಾಗ ಅಧ್ಯಕ್ಷ ನಯಾಜ್, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಪ್ರಸಾದ್ ಅಮೀನ್, ಕಾರ್ಯದರ್ಶಿ ಶದಾಬ್, ಎಚ್.ಟಿ.ವೆಂಕಟೇಶ್, ವಿದ್ಯಾರ್ಥಿ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಆದಿಲ್, ಆಲ್ದೂರು ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ವಿರೂಪಾಕ್ಷ, ಚಿಕ್ಕಮಗಳೂರು ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಹಿರೇಮಗಳೂರು ರಾಮಚಂದ್ರ, ಕಸಬಾ ಹೋಬಳಿ ಕಾಂಗ್ರೆಸ್ ಅಧ್ಯಕ್ಷ ನೆಟ್ಟೇಕೆರೆಹಳ್ಳಿ ನಾಗೇಶ್, ಯುವ ಕಾಂಗ್ರೆಸ್ ಅಧ್ಯಕ್ಷ ಮಧು, ಬ್ಲಾಕ್ ಕಾಂಗ್ರೆಸ್ ನಗರ ಎಸ್ಸಿ ಘಟಕ ಅಧ್ಯಕ್ಷ ಎಚ್.ಎಸ್.ಜಗದೀಶ್, ಜೆಡಿಎಸ್ ಮುಖಂಡರಾದ ಕೋಟೆ ಚಂದ್ರು, ಪ್ರದೀಪ್, ಕುಮಾರ್ ಮತ್ತಿತರರು ಪಾಲ್ಗೊಂಡಿದ್ದರು.

ನೆಟ್ಟೆಕೆರೆಹಳ್ಳಿಯಲ್ಲಿ ಹೋಬಳಿ ಕಾಂಗ್ರೆಸ್ ಅಧ್ಯಕ್ಷ ನಾಗೇಶ್, ಯುವ ಕಾಂಗ್ರೆಸ್ ಅಧ್ಯಕ್ಷ ಮಧು ಅವರ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News