ಪಾದಚಾರಿಗೆ ವಾಹನ ಢಿಕ್ಕಿ: ಗಾಯಾಳು ಮೃತ್ಯು
ಮಂಗಳೂರು, ಮೇ 20: ದ್ವಿಚಕ್ರ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೋರ್ವರು ಮೃತಪಟ್ಟಿರುವ ಘಟನೆ ನಡೆದಿದೆ.
ಮೃತರನ್ನು ಹಾವೇರಿಯ ನಾಗನೂರು ನಿವಾಸಿ ಬಸವರಾಜ ಸಂಕಪ್ಪ (58) ಎಂದು ಗುರುತಿಸಲಾಗಿದೆ. ಅವರು ಶುಕ್ರವಾರ ರಾತ್ರಿ ಸುಮಾರು 9 ಗಂಟೆಗೆ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಕಡೆಗೆ ಡಿವೈಡರ್ ದಾಟಿ ರಸ್ತೆ ಇನ್ನೊಂದು ಬದಿಗೆ ಹೋಗುತ್ತಿದ್ದಾಗ ದ್ವಿಚಕ್ರ ವಾಹನ ಢಿಕ್ಕಿ ಹೊಡೆದಿದೆ. ಪರಿಣಾಮವಾಗಿ ಬಸವರಾಜ್ ಅವರ ತಲೆಗೆ ಕಾಲುಗಳಿಗೆ ಗಂಭೀರ ಸ್ವರೂಪ ಗಾಯಗಳಾಗಿದ್ದು, ಪ್ರಜ್ಞಾನ ಹೀನಸ್ಥಿತಿಯಲ್ಲಿದ್ದ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶನಿವಾರ ಮುಂಜಾವ ಸುಮಾರು 1 ಗಂಟೆ ಹೊತ್ತಿಗೆ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.
ದ್ವಿಚಕ್ರ ವಾಹನ ಚಾಲಕ ಬಿಜಿತ್ ಎಂಬಾತ ನಿರ್ಲಕ್ಷದ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಈ ಬಗ್ಗೆ ಮಂಗಳೂರು ಸಂಚಾರ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.