ಪೊಲೀಸರು ಮನೆಗೆ ನುಗ್ಗಿ ಹಲ್ಲೆ ಮಾಡಿದ್ದಾರೆ: ಆರೋಪ

Update: 2018-05-20 16:41 GMT

ವಿಟ್ಲ, ಮೇ 19: ವಿಟ್ಲ ಸಮೀಪದ ಕೆಲಿಂಜದಲ್ಲಿ ನಿನ್ನೆ ರಾತ್ರಿ ನಡೆದ ಘರ್ಷಣೆಯ ಸಂದರ್ಭದಲ್ಲಿ ಇಬ್ಬರು ಪೊಲೀಸರು ಏಕಾಏಕಿ ನುಗ್ಗಿ ಮನೆಯಲ್ಲಿದ್ದವರಿಗೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ಮನೆ ಮಾಲಕ ಸಂಕಪ್ಪ ಗೌಡ ಎಂಬವರು ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ರವಿವಾರ ಪ್ರಕರಣ ದಾಖಲಾಗಿದೆ.

ತಾನು ನಿನ್ನೆ ರಾತ್ರಿ ಮನೆಯಲ್ಲಿ ಮಲಗಿದ್ದಾಗ, ಏಕಾಏಕಿ ಪೊಲೀಸರು ನುಗ್ಗಿ ಮನೆಯಲ್ಲಿದ್ದ ತನ್ನ ಅಣ್ಣನ ಮಗ ಪುರಂದರ ಎಂಬವರ ಮೇಲೆ ಲಾಠಿಯಿಂದ ಹೊಡೆದಿದ್ದು, ಇದನ್ನು ತಡೆಯಲು ಬಂದ  ಅಣ್ಣನ ಪತ್ನಿ ಕಮಲ ಅವರ ಮೇಲೆಯೂ ಬೂಟು ಕಾಲಿನಿಂದ ಹಲ್ಲೆ ಮಾಡಿದ್ದಾರೆ ಎಂದು ಸಂಕಪ್ಪ ಗೌಡ ಅವರು ಪೊಲೀಸ್ ದೂರಿನಲ್ಲಿ ತಿಳಿಸಿದ್ದಾರೆ. ಅಲ್ಲದೆ, ಘಟನೆಯ ಬಗ್ಗೆ ತನ್ನ ಸೊಸೆ ವಿಡಿಯೋ ಚಿತ್ರೀಕರಣ ಮಾಡಿದ್ದು, ಇವರ ಮೇಲೆಯೂ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂದು ಸಂಕಪ್ಪ ಗೌಡ ಅವರು ಪೊಲೀಸ್ ದೂರಿನಲ್ಲಿ ತಿಳಿಸಿದ್ದಾರೆ. 

ಈ ಬಗ್ಗೆ ಸರಿಯಾದ ತನಿಖೆ ನಡೆಸಿ ತಪ್ಪಿತಸ್ಥರಿಗೆ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕಾಗಿ ಸಂಕಪ್ಪ ಗೌಡ ಅವರು ಪೊಲೀಸ್ ದೂರಿನಲ್ಲಿ ಒತ್ತಾಯಿಸಿದ್ದಾರೆ.
ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News