ಪರಮೇಶ್ವರ್‌ ಗೆ ಡಿಸಿಎಂ, ಡಾ.ಮಹದೇವಪ್ಪಗೆ ಎಂಎಲ್‌ಸಿ ಸ್ಥಾನ ನೀಡಲು ಒತ್ತಾಯ

Update: 2018-05-21 15:22 GMT

ಬೆಂಗಳೂರು, ಮೇ 21: 2013ರಲ್ಲಿ ಮುಖ್ಯಮಂತ್ರಿ ಸ್ಥಾನ ವಂಚಿತರಾಗಿದ್ದ ಡಾ. ಜಿ.ಪರಮೇಶ್ವರ್‌ಗೆ ಉಪ ಮುಖ್ಯಮಂತ್ರಿ ಸ್ಥಾನ ಹಾಗೂ ಡಾ.ಎಚ್.ಸಿ. ಮಹದೇವಪ್ಪ ಅವರಿಗೆ ಎಂಎಲ್‌ಸಿ ಸ್ಥಾನವನ್ನು ನೀಡಬೇಕೆಂದು ಛಲವಾದಿ ಮಹಾಸಭಾ ರಾಜ್ಯಾಧ್ಯಕ್ಷ ಎಚ್.ಪಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಡಾ.ಜಿ.ಪರಮೇಶ್ವರ್ ಉಪ ಮುಖ್ಯಮಂತ್ರಿಯಾಗಿ ಮೇ 23ರಂದೇ ಪ್ರಮಾಣ ವಚನ ಸ್ವೀಕರಿಸಬೇಕು. ಅಲ್ಲದೆ, ಮಹದೇವಪ್ಪ ಅವರಿಗೆ ಮೇಲ್ಮನೆ ಸ್ಥಾನ ನೀಡದಿದ್ದರೆ ದಲಿತ ಸಮುದಾಯ ಕಾಂಗ್ರೆಸ್ ಪಕ್ಷದ ವಿರುದ್ಧ ತಿರುಗಿಬೀಳುವ ಸಾಧ್ಯತೆಗಳಿವೆ ಎಂದು ಕುಮಾರ್ ಎಚ್ಚರಿಸಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ಶೇ.72ರಷ್ಟು ಮತದಾನವಾಗಿದ್ದು, ಆ ಪೈಕಿ ಶೇ.51ರಷ್ಟು ಮತದಾನ ದಲಿತರು ಮಾಡಿದ್ದು, ಶೇ.40ರಷ್ಟು ಮತಗಳನ್ನು ಕಾಂಗ್ರೆಸ್ ಪಕ್ಷಕ್ಕೆ ಚಲಾಯಿಸಿದ್ದಾರೆ ಎಂದ ಅವರು, ಉಭಯ ನಾಯಕರಿಗೆ ಸೂಕ್ತ ಸ್ಥಾನಮಾನ ನೀಡದಿದ್ದರೆ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ಬೆಲೆ ತೆರಬೇಕಾಗುತ್ತದೆ. ಅಲ್ಲದೆ, ಬೃಹತ್ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.


Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News