ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಕೇಜ್ರಿವಾಲ್

Update: 2018-05-21 16:01 GMT

ಹೊಸದಿಲ್ಲಿ,ಮೇ 21: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಆಹ್ವಾನದ ಮೇರೆಗೆ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿಯವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸರಕಾರಿ ಅಧಿಕಾರಿಯೋರ್ವರು ಸೋಮವಾರ ಇಲ್ಲಿ ತಿಳಿಸಿದರು.

ಏಕೈಕ ಅತಿದೊಡ್ಡ ಪಕ್ಷವೆಂಬ ನೆಲೆಯಲ್ಲಿ ಬಹುಮತವಿಲ್ಲದಿದ್ದರೂ ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದ ಬಿಜೆಪಿ ನಾಯಕ ಬಿ.ಎಸ್. ಯಡಿಯೂರಪ್ಪ ಅವರು ಶನಿವಾರ ವಿಶ್ವಾಸಮತವನ್ನು ಕೋರದೇ ರಾಜೀನಾಮೆಯನ್ನು ಸಲ್ಲಿಸಿದ್ದು, ರಾಜ್ಯಪಾಲರ ಆಹ್ವಾನದ ಮೇರೆಗೆ ಸರಕಾರ ರಚಿಸಲು ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿಕೂಟ ಸಜ್ಜಾಗಿದೆ. ಕುಮಾರಸ್ವಾಮಿಯವರು ಬುಧವಾರ ಬೆಂಗಳೂರಿನಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News