ರಾಹುಲ್, ಸೋನಿಯಾರನ್ನು ಭೇಟಿಯಾದ ಬಳಿಕ ಉಪಮುಖ್ಯಮಂತ್ರಿ ಸ್ಥಾನದ ಬಗ್ಗೆ ಕುಮಾರಸ್ವಾಮಿ ಹೇಳಿದ್ದೇನು?

Update: 2018-05-21 16:15 GMT

ಹೊಸದಿಲ್ಲಿ,  ಮೇ 21: ನಮ್ಮ ನಡುವೆ ಯಾವುದೇ ಚೌಕಾಶಿಯಿಲ್ಲ. ಜೊತೆಯಾಗಿಯೇ ನಾವು ಕೆಲಸ ಮಾಡುತ್ತೇವೆ. ಕಾಂಗ್ರೆಸ್ ನಾಯಕರ ಸಲಹೆಗಳನ್ನು ಪಡೆದುಕೊಳ್ಳಲು ನಾನು ಇಲ್ಲಿಗೆ ಆಗಮಿಸಿದ್ದೇನೆ ಎಂದು ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ಹೊಸದಿಲ್ಲಿಯಲ್ಲಿ ರಾಹುಲ್ ಗಾಂಧಿ, ಸೋನಿಯಾ ಗಾಂಧಿಯವರನ್ನು ಭೇಟಿ ಮಾಡಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು ಉಪಮುಖ್ಯಮಂತ್ರಿ ನೇಮಕದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿ, ಏನೆಲ್ಲಾ ಮಾಡಬೇಕೆಂದು ರಾಹುಲ್ ಗಾಂಧಿ ಹೇಳಿದ್ದಾರೆ. ಈ ಬಗ್ಗೆ ಚರ್ಚೆ ನಡೆಸಲು ಹಾಗು ಅಂತಿಮ ನಿರ್ಧಾರ ಕೈಗೊಳ್ಳುವ ಜವಾಬ್ದಾರಿಯನ್ನು ಅವರು ಕೆ.ಸಿ.ವೇಣುಗೋಪಾಲ್ ರಿಗೆ ವಹಿಸಿದ್ದಾರೆ. ಸ್ಥಳೀಯ ನಾಯಕರು ಹಾಗು ವೇಣುಗೋಪಾಲ್ ನಾಳೆ ಈ ಬಗ್ಗೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ” ಎಂದು ಹೇಳಿದರು.

ಕುಮಾರಸ್ವಾಮಿ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಾಗಿ ಇದೇ ಸಂದರ್ಭ ರಾಹುಲ್ ಗಾಂಧಿ ಮಾಹಿತಿ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News