ಅರಿವು ಶೈಕ್ಷಣಿಕ ಸಾಲ ಯೋಜನೆಗೆ ಅರ್ಜಿ ಆಹ್ವಾನ

Update: 2018-05-21 18:24 GMT

ಉಡುಪಿ, ಮೇ 21: ಅರಿವು ಶೈಕ್ಷಣಿಕ ಸಾಲ ಯೋಜನೆಯಲ್ಲಿ ಸಿಇಟಿ ಮೂಲಕ ಪ್ರವೇಶ ಪಡೆಯುವ ವೃತ್ತಿಪರ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವಾರ್ಷಿಕ ಶೇ.2ರ ಬಡ್ಡಿದರದಲ್ಲಿ ವಾರ್ಷಿಕವಾಗಿ ಗರಿಷ್ಠ ಒದು ಲಕ್ಷ ರೂ.ಗಳವರೆಗೆ ಸಾಲ ಮಂಜೂರು ಮಾಡಲಾಗುವುದು. 2018-19ನೇ ಸಾಲಿನಲ್ಲಿ ಸಿಇಟಿ ಮೂಲಕ ಆಯ್ಕೆಯಾಗಿ ಸಾಲ ಪಡೆಯ ಬಯಸುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಸಿಇಟಿಗೆ ಪಾವತಿಸಬೇಕಾದ ಶುಲ್ಕವನ್ನು ಸಿಇಟಿಯಿಂದ ಸೀಟು ಪಡೆಯುವ ಹಂತದಲ್ಲಿಯೇ ನಿಗಮದಿಂದ ಸಾಲ ಮಂಜೂರು ಮಾಡಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ್ಕೆ ಹೊಂದಾಣಿಕೆ ಮಾಡಲಾಗುವುದು.

2018-19ನೇ ಸಾಲಿನಲ್ಲಿ ಸಿಇಟಿ ಮೂಲಕ ಆಯ್ಕೆಯಾಗಿ ಸಾಲ ಪಡೆಯ ಬಯಸುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಸಿಇಟಿಗೆ ಪಾವತಿಸಬೇಕಾದ ಶುಲ್ಕವನ್ನು ಸಿಇಟಿಯಿಂದ ಸೀಟು ಪಡೆಯುವ ಹಂತದಲ್ಲಿಯೇ ನಿಗಮದಿಂದ ಸಾಲ ಮಂಜೂರು ಮಾಡಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಹೊಂದಾಣಿಕೆ ಮಾಡಲಾಗುವುದು. 2018-19ನೇ ಸಾಲಿನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ/ಸಿಇಟಿ ಮೂಲಕ ಸೀಟು ಪಡೆದು ವೃತ್ತಿಪರ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡಲು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಅರಿವು ಶೈಕ್ಷಣಿಕ ಸಾಲ ಯೋಜನೆಯಲ್ಲಿ ಸಾಲ ಪಡೆಯಬಯಸುವ ಹಿಂದುಳಿದ ವರ್ಗಗಳ ಪ್ರ-1, ಪ್ರ-2ಎ, ಪ್ರ-3ಎ ಮತ್ತು ಪ್ರ-3ಬಿ ಗೆ ಸೇರಿದ್ದು, (ವಿಶ್ವಕರ್ಮ ಮತ್ತು ಉಪ ಜಾತಿಗಳು, ಅಲ್ಪಸಂಖ್ಯಾತರು ಮತ್ತು ಉಪಜಾತಿಗಳು, ಉಪ್ಪಾರ ಮತ್ತು ಉಪಜಾತಿಗಳು ಹಾಗೂ ಬೆಸ್ತ/ಅಂಬಿಗ ಮತ್ತು ಅದರ ಉಪಜಾತಿಗಳನ್ನು ಹೊರತುಪಡಿಸಿ), ವಿದ್ಯಾರ್ಥಿ ಮತ್ತು ಕುಟುಂಬದ ವಾರ್ಷಿಕ ವರಮಾನ 3.50 ಲಕ್ಷ ರೂ.ಗಳ ಮಿತಿಯಲ್ಲಿರುವ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮೂಲಕ ಆಹ್ವಾನಿಸಲಾಗಿದೆ.

ಸಾಲ ಪಡೆಯಲು ಇಚ್ಚಿಸುವ ವಿದ್ಯಾರ್ಥಿಗಳು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವೆಬ್‌ಸೈಟ್ www.karnataka.gov.in/dbcdc ರಲ್ಲಿ ಲಾಗಿನ್ ಆಗಿ ವೆಬ್‌ಸೈಟ್‌ನಲ್ಲಿ ಲಭ್ಯವಿರುವ Username-infra\dbcdcarivu  ಮತ್ತು ಪಾಸ್‌ವರ್ಡ್- ಡಿಬಿ(ಡಿ# 098ನ್ನು ನಮೂದಿಸಿ ಅರ್ಜಿಯನ್ನು ಆನ್‌ಲೈನ್‌ನಲ್ಲಿ ಭರ್ತಿ ಮಾಡಬೇಕು. ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವಿದ್ಯಾರ್ಥಿ ಮತ್ತು ಪೋಷಕರ ಭಾವಚಿತ್ರ. ಆಧಾರ್ ಕಾರ್ಡ್/ಚುನಾವಣಾ ಗುರುತಿನ ಚೀಟಿ, ಎಸೆಸೆಲ್ಸಿ ಅಂಕಪಟ್ಟಿ, ಸಿಇಟಿ/ನೀಟ್ ಪ್ರವೇಶ ಪರೀಕ್ಷೆ ಅಡ್ಮಿಷನ್ ಟಿಕೆಟ್ ಈ ದಾಖಲೆಗಳನ್ನು ಸ್ಕಾನ್ ಮಾಡಿ ಅರ್ಜಿಯೊಂದಿಗೆ ಆನ್‌ಲೈನ್‌ನಲ್ಲಿ ಜೂನ್ 8ರೊಳಗೆ ಸಲ್ಲಿಸಬೇಕು. ವಿದ್ಯಾರ್ಥಿಯು ಒಂದೇ ಜಿಲ್ಲೆಯಿಂದ ಅರ್ಜಿಯನ್ನು ಆನ್‌ಲೈನ್‌ನಲ್ಲಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗೆ ನಿಗಮದ ಜಿಲ್ಲಾ ಕಛೇರಿಯನ್ನು ಅಥವಾ ನಿಗಮದ ಕೇಂದ್ರ ಕಛೇರಿಯನ್ನು ಸಂಪರ್ಕಿಸುವಂತೆ, ಜಿಲ್ಲಾ ವ್ಯವಸ್ಥಾಪಕರು, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಉಡುಪಿ ಅವರ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News