ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಗಣೇಶ್ ಕಾರ್ಣಿಕ್ ನಾಮಪತ್ರ ಸಲ್ಲಿಕೆ

Update: 2018-05-22 16:40 GMT

ಮಂಗಳೂರು.22:ಜೂನ್ 8ರಂದು ನಡೆಯಲಿರುವ ವಿಧಾನ ಪರಿಷತ್ತಿನ ನೈರುತ್ಯ ಶಿಕ್ಷಕ ,ನೈರುತ್ಯ ಪದವೀಧರ ಕ್ಷೇತ್ರ ಹಾಗೂ ದಕ್ಷಿಣ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳಾಗಿ ಕ್ಯಾಪ್ಟನ್ ಗಣೇಶ್ ಕಾರ್ಣಿಕ್,ಆಯನೂರು ಮಂಜುನಾಥ್ ಮತ್ತು ಪ್ರೊ.ನಿರಂಜನ ಮೂರ್ತಿ ಮೇ 21ರಂದು ಮೈಸೂರಿನ ಪ್ರಾದೇಶಿಕ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿರುವುದಾಗಿ ಕ್ಯಾ.ಗಣೇಶ್ ಕಾರ್ಣಿಕ್ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

ನಾಮಪತ್ರ ಸಲ್ಲಿಕೆಯ ಸಂರ್ಬದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್,ಶೋಭಾ ಕರಂದ್ಲಾಜೆ ಹಾಗೂ ಬಿಜೆಪಿಯ ಶಾಸಕರು ಭಾಗವಹಿಸಿದ್ದರು ಎಂದು ಗಣೇಶ್ ಕಾರ್ನಿಕ್ ತಿಳಿಸಿದ್ದಾರೆ.

ಕಳೆದ ಐದು ವರ್ಷಗಳಲ್ಲಿ ರಾಜ್ಯ ಸರಕಾರ ಶಿಕ್ಷಣ ಕ್ಷೇತ್ರವನ್ನು ಕಡೆಗಣಿಸಿದೆ. ಹಲವಾರು ಹುದ್ದೆಗಳು ಭರ್ತಿಯಾಗದೆ ಖಾಲಿ ಉಳಿದಿವೆ. ಶಿಕ್ಷಣ ಕ್ಷೇತ್ರಕ್ಕೆ ಬಿಜೆಪಿ ಸರಕಾರ ಅನುದಾನ ಹೆಚ್ಚಿಸಿದೆ. ಈ ಬಾರಿ ಬಿಜೆಪಿಗೆ ಪೂರಕ ವಾತವರಣವಿದೆ ಕ್ಷೇತ್ರ ವ್ಯಾಪ್ತಿಯಲ್ಲಿ 27 ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಜಯಗಳಿಸಿದೆ ಈ ಬಾರಿಯೂ ನನ್ನನ್ನು ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಬೆಂಬಲಿಸಬೇಕು ಎಂದು ಗಣೇಶ್ ಕಾರ್ನಿಕ್ ಮನವಿ ಮಾಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ ,ಮಾಜಿ ಶಾಸಕ ಮೋನಪ್ಪ ಭಂಡಾರಿ, ಬಿಜೆಪಿ ಮುಖಂಡರಾದ ಬ್ರಿಜೇಶ್ ಚೌಟ ಮೊದಲಾದವರು ಉಪಸ್ಥಿತರಿದ್ದರು.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News