ಕ್ಯೂಬಾ ವಿಮಾನ ಅಪಘಾತ: ಬದುಕುಳಿದಿದ್ದ ಮಹಿಳೆ ಸಾವು

Update: 2018-05-22 16:44 GMT

ಹವಾನಾ (ಕ್ಯೂಬಾ), ಮೇ 22: ಇತ್ತೀಚೆಗೆ ಕ್ಯೂಬಾದಲ್ಲಿ ನಡೆದ ವಿಮಾನ ಅಪಘಾತದಲ್ಲಿ ಬದುಕುಳಿದ ಮೂವರು ಮಹಿಳೆಯರ ಪೈಕಿ ಒಬ್ಬರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಸಚಿವಾಲಯ ಸೋಮವಾರ ತಿಳಿಸಿದೆ.

 ಇದರೊಂದಿಗೆ ಕ್ಯೂಬಾನ ಡಿ ಏವಿಯೇಶನ್ ವಿಮಾನಯಾನ ಸಂಸ್ಥೆಗೆ ಸೇರಿದ ವಿಮಾನ ಪತನಗೊಂಡು ಸಂಭವಿಸಿದ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 111ಕ್ಕೇರಿದೆ. 23 ವರ್ಷದ ಮಹಿಳೆಯನ್ನು ಗಂಭೀರ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಅವರು ಚೇತರಿಸಿಕೊಳ್ಳಲಿಲ್ಲ. ಇತರ ಇಬ್ಬರು ಮಹಿಳೆಯರ ಪರಿಸ್ಥಿತಿಯೂ ಗಂಭೀರವಾಗಿದೆ.

ಶುಕ್ರವಾರ 113 ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಹೊತ್ತಿದ್ದ ವಿಮಾನ ಕ್ಯೂಬಾ ರಾಜಧಾನಿ ಹವಾನಾದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹಾರಾಟ ಆರಂಭಿಸಿದ ಕೆಲವೇ ಕ್ಷಣಗಳಲ್ಲಿ ಸಮೀಪದ ಹೊಲವೊಂದಕ್ಕೆ ಪತನಗೊಂಡಿರುವುದನ್ನು ಸ್ಮರಿಸಬಹುದಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News