×
Ad

ಉಡುಪಿ : ಪತ್ರಕರ್ತನಿಗೆ ಬೀಳ್ಗೊಡುಗೆ ಸಮಾರಂಭ

Update: 2018-05-22 23:03 IST

ಉಡುಪಿ, ಮೇ 22: ಉಡುಪಿಯಲ್ಲಿ ಕಳೆದ ಆರು ವರ್ಷಗಳಿಂದ ಪ್ರಜಾವಾಣಿ ಪತ್ರಿಕೆಯ ವರದಿಗಾರರಾಗಿ ಕಾರ್ಯನಿರ್ವಹಿಸಿ ಇದೀಗ ಹುಬ್ಬಳ್ಳಿಗೆ ವರ್ಗಾವಣೆಗೊಂಡಿರುವ ನವೀನ್‌ಕುಮಾರ್‌ಗೆ ಬೀಳ್ಕೊಡುಗೆ ಸಮಾರಂಭವನ್ನು ಮಂಗಳವಾರ ಉಡುಪಿ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಲಾಗಿತ್ತು.

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಗಣೇಶ್ ಪ್ರಸಾದ್ ಪಾಂಡೇಲು ನವೀನ್ ಅವರನ್ನು ಅಭಿನಂದಿಸಿದರು. ಈ ಸಂದರ್ಭ ದಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಸಂತೋಷ್, ಕೋಶಾಧಿಕಾರಿ ದಿವಾಕರ್, ಪ್ರೆಸ್ ಕ್ಲಬ್ ಸಹಸಂಚಾಲಕರಾದ ಸುಭಾಶ್ಚಂದ್ರ ವಾಗ್ಳೆ ಹಾಗೂ ಅನೀಶ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News