ಮುಖ್ಯಮಂತ್ರಿಯಾಗಿ ಕುಮಾರಸ್ವಾಮಿ ಅಧಿಕಾರ ಸ್ವೀಕಾರ: ಜೆಡಿಎಸ್‍ನಿಂದ ಮಡಿಕೇರಿಯಲ್ಲಿ ಸಂಭ್ರಮಾಚರಣೆ

Update: 2018-05-23 12:04 GMT

ಮಡಿಕೇರಿ,ಮೇ.23: ಜಾತ್ಯತೀತ ಜನತಾದಳದ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಕರ್ನಾಟಕ ರಾಜ್ಯದ 25 ನೇ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಜೆಡಿಎಸ್ ಕಾರ್ಯಕರ್ತರು ವಿಶೇಷ ಪೂಜೆ ಪ್ರಾರ್ಥನೆಯ ಮೂಲಕ ಸಂಭ್ರಮಿಸಿದರು.

ಜೆಡಿಎಸ್ ಸಂಘಟನಾ ಕಾರ್ಯದರ್ಶಿ ಬಿ.ಎಂ.ಧರ್ಮಪ್ಪ ಅವರ ನೇತೃತ್ವದಲ್ಲಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ನಗರದ ಶ್ರೀಓಂಕಾರೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಸಂತ ಮೈಕಲರ ಚರ್ಚ್ ಹಾಗೂ ಮಹದೇವಪೇಟೆಯ ಮಸೀದಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿ ಮುಂದಿನ ಐದು ವರ್ಷಗಳ ಕಾಲ ಯಶಸ್ವಿಯಾಗಿ ಕಾರ್ಯನಿರ್ವಹಿಸಲಿ ಎಂದು ಹಾರೈಸಿದರು. ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News