ಒಂದನೆ ತರಗತಿಯ ದಾಖಲಾತಿಗೆ 5 ವರ್ಷ 5ತಿಂಗಳು ನಿಗದಿಪಡಿಸಿ ಶಿಕ್ಷಣ ಇಲಾಖೆ ಆದೇಶ

Update: 2018-05-23 12:57 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಮೇ 23: ಸರಕಾರಿ, ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳಲ್ಲಿ 1ನೆ ತರಗತಿಗೆ ದಾಖಲಾಗಲು ಮಗುವಿಗೆ ಕನಿಷ್ಟ ವಯೋಮಿತಿ 5 ವರ್ಷ 5 ತಿಂಗಳಿಗೆ ನಿಗದಿಪಡಿಸಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಇದಕ್ಕೂ ಮೊದಲು 5ವರ್ಷ 10ತಿಂಗಳು ನಿಗದಿಯಾಗಿತ್ತು. ಈ ಬಗ್ಗೆ ಪೋಷಕರು, ಶಿಕ್ಷಕರು ವಿರೋಧ ವ್ಯಕ್ತಪಡಿಸಿದ್ದರು. ಹಾಗೂ 2015-16, 2016-17ನೆ ಸಾಲಿನಲ್ಲಿ ಎಲ್‌ಕೆಜಿಗೆ ಸೇರಿದ ಮಕ್ಕಳು ನಿಗದಿತ ವಯೋಮಿತಿ 3ವರ್ಷ 10ತಿಂಗಳು ಪೂರ್ಣಗೊಳಿಸದೆ ಸ್ವ ಇಚ್ಛಾ ದಾಖಲಾತಿ ಪಡೆದುಕೊಂಡಿರುವುದು ಕಂಡುಬಂದಿದೆ.

ಈ ಹಿನ್ನೆಲೆಯಲ್ಲಿ 1ನೆ ತರಗತಿಗೆ ಪ್ರವೇಶ ಪಡೆಯುವ ಸಂದರ್ಭದಲ್ಲಿ ನಿಗದಿತ ವಯೋಮಾನ 5ವರ್ಷ 10ತಿಂಗಳು ಪೂರ್ಣಗೊಳಿಸದೆ ಇರುವ ಮಕ್ಕಳು 1ನೆ ತರಗತಿಗೆ ಪ್ರವೇಶ ಪಡೆಯಲು ಅರ್ಹತೆ ಹೊಂದಿರುವುದಿಲ್ಲ. ಈ ಹಿನ್ನೆಲೆಯಲ್ಲಿ ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ 2017-18ನೆ ಸಾಲಿಗೆ ಮಾತ್ರ ಅನ್ವಯವಾಗುವಂತೆ ಒಂದನೆ ತರಗತಿಯ ದಾಖಲಾತಿಯ ವಯೋಮಿತಿಯನ್ನು 5ವರ್ಷ 5ತಿಂಗಳಿಗೆ ನಿಗದಿಪಡಿಸಿ ಆದೇಶಿಸಲಾಗಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News