28 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಖಚಿತ: ಬಿಎಸ್‌ವೈ

Update: 2018-05-23 13:05 GMT

ಬೆಂಗಳೂರು, ಮೇ 23: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಎಲ್ಲ 28 ಕ್ಷೇತ್ರಗಳಲ್ಲಿ ಬಿಜೆಪಿಯನ್ನು ಗೆಲ್ಲಿಸುವುದರ ಮೂಲಕ ಪ್ರಧಾನಿ ನರೇಂದ್ರ ಮೋದಿಗೆ ಕೊಡುಗೆ ನೀಡಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

ಬುಧವಾರ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರಕಾರ ರಚನೆಯನ್ನು ಖಂಡಿಸಿ ನಗರದ ಆನಂದ್‌ ರಾವ್ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, 2013ರ ವಿಧಾನಸಭಾ ಚುನಾವಣೆಯಲ್ಲಿ ಕೇವಲ 40 ಸ್ಥಾನಗಳನ್ನು ಪಡೆದಿದ್ದ ಬಿಜೆಪಿ, 2018ರ ಚುನಾವಣೆಯಲ್ಲಿ 104ಕ್ಕೆ ಏರಿದ್ದೇವೆ. ಅದೇ ಮಾದರಿಯಲ್ಲಿ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿರುವ ಎಲ್ಲ 28 ಸ್ಥಾನಗಳಲ್ಲಿ ಜಯಗಳಿಸಲಾಗುವುದು ಎಂದು ತಿಳಿಸಿದರು.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವುದಕ್ಕಾಗಿ ಬಿಜೆಪಿಯೇತರ ಪಕ್ಷಗಳು ಒಗ್ಗಟ್ಟಾಗುತ್ತಿವೆ. ಈ ಬಗ್ಗೆ ಬಿಜೆಪಿಗೆ ಯಾವ ಭಯವೂ ಇಲ್ಲ. ಈಗಿನಿಂದಲೇ ನಮ್ಮ ನಮ್ಮ ಕಾರ್ಯಕರ್ತರು ಕಾರ್ಯಪ್ರವೃತ್ತರಾಗಿದ್ದಾರೆ. ಹೀಗಾಗಿ ಲೋಕಸಾಭಾ ಚುನಾವಣೆಯಲ್ಲಿ ರಾಜ್ಯದಲ್ಲಿರುವ ಎಲ್ಲ 28 ಕ್ಷೇತ್ರಗಳಲ್ಲಿ ಜಯಗಳಿಸುವುದರಲ್ಲಿ ಯಾವುದೆ ಅನುಮಾನವಿಲ್ಲವೆಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News