ಆದಿತ್ಯನಾಥ್ ಸರಕಾರದಿಂದ ಉತ್ತರ ಪ್ರದೇಶದ ಮದ್ರಸಾಗಳಿಗೆ ಎನ್‍ಸಿಇಆರ್ ಟಿ ಪಠ್ಯ
Update: 2018-05-23 19:57 IST
ಲಕ್ನೋ, ಮೇ 23: ಉತ್ತರ ಪ್ರದೇಶದ ಆದಿತ್ಯನಾಥ್ ನೇತೃತ್ವದ ಸರಕಾರದ ಸಚಿವ ಸಂಪುಟವು ರಾಜ್ಯದ ಮದ್ರಸಾಗಳಲ್ಲಿ ನ್ಯಾಷನಲ್ ಕೌನ್ಸಿಲ್ ಆಫ್ ಎಜುಕೇಶನಲ್ ರಿಸರ್ಚ್ ಎಂಡ್ ಟ್ರೈನಿಂಗ್ (ಎನ್‍ಸಿಇಆರ್ ಟಿ) ಪಠ್ಯಪುಸ್ತಕಗಳನ್ನು ಪರಿಚಯಿಸಲು ನಿರ್ಧರಿಸಿದೆ.
ಉರ್ದು, ಹಿಂದಿ, ಇಂಗ್ಲಿಷ್ ಭಾಷೆಗಳಲ್ಲಿರುವ ಎನ್‍ಸಿಇಆರ್ ಟಿ ಪಠ್ಯಪುಸ್ತಕಗಳು ವಿದ್ಯಾರ್ಥಿಗಳಿಗೆ ಮದ್ರಸಾಗಳಲ್ಲಿ ಉತ್ತಮ ಶಿಕ್ಷಣ ಹಾಗೂ ಅವರ ಕೌಶಲ್ಯಗಳನ್ನು ಹೆಚ್ಚಿಸುವ ಉದ್ದೇಶ ಹೊಂದಿದೆ ಎಂದು ಹೇಳಲಾಗಿದೆ. ಎನ್‍ಸಿಇಆರ್ ಟಿ ಪಠ್ಯಕ್ರಮವನ್ನು ಅನುಸರಿಸುವಂತೆ ಹಾಗೂ ವಿಜ್ಞಾನ, ಗಣಿತ ಹಾಗೂ ಸಮಾಜವಿಜ್ಞಾನ ವಿಷಯಗಳನ್ನೂ ವಿದ್ಯಾರ್ಥಿಗಳಿಗೆ ಕಲಿಸುವಂತೆ ಮದ್ರಸಾಗಳಿಗೆ ಸೂಚಿಸಲಾಗಿದೆ ಎನ್ನಲಾಗಿದೆ.
ಮದ್ರಸಾಗಳಲ್ಲಿ ಆಧುನಿಕ ಶಿಕ್ಷಣ ಒದಗಿಸಲು ಕ್ರಮ ಕೈಗೊಳ್ಳಬೇಕೆಂದು ಮುಖ್ಯಮಂತ್ರಿ ಆದಿತ್ಯನಾಥ್ ಈ ಹಿಂದೆ ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.