ಕರ್ನಾಟಕದ ನೂತನ ಮುಖ್ಯಮಂತ್ರಿಗೆ ಪ್ರಧಾನಿ ಮೋದಿ ಶುಭಾಶಯ
Update: 2018-05-23 20:53 IST
ಬೆಂಗಳೂರು, ಮೇ 23: ಇಂದು ಪ್ರಮಾಣ ವಚನ ಸ್ವೀಕರಿಸಿದ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೂರವಾಣಿ ಕರೆ ಮಾಡಿ ಶುಭಾಶಯ ಕೋರಿದರು.
ಅಭಿವೃದ್ಧಿ ವಿಚಾರದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವೆ ಉತ್ತಮ ಬಾಂಧವ್ಯ ಬೆಳೆಸುವ ಆಶಯ ವ್ಯಕ್ತಪಡಿಸಿದರು ಎಂದು ಮುಖ್ಯಮಂತ್ರಿ ಕಚೇರಿ ಪ್ರಕಟಣೆ ತಿಳಿಸಿದೆ.