ವಿಶ್ವ ಪರಿಸರ ದಿನಾಚರಣೆ: ವಿಜ್ಞಾನ ಮಾದರಿ ಸ್ಪರ್ಧೆ
Update: 2018-05-23 20:56 IST
ಉಡುಪಿ, ಮೇ 23: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಉಡುಪಿ ಪ್ರಾದೇಶಿಕ ಕಚೇರಿ, 2018-19ನೇ ಸಾಲಿನ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಜೂನ್2ರಂದು ಬೆಳಗ್ಗೆ 10 ಗಂಟೆಗೆ ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜು ರಸ್ತೆಯಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ‘ವಿಜ್ಞಾನ ಮಾದರಿ’ ಸ್ಪರ್ಧೆಯನ್ನು ಆಯೋಜಿಸಿದೆ.
ಉಡುಪಿ ಜಿಲ್ಲೆಯ ಎಲ್ಲಾ ಪ್ರಾಥಮಿಕ ಹಾಗೂ ಪೌಢಶಾಲಾ ವಿದ್ಯಾರ್ಥಿಗಳು ಈ ಸ್ಪರ್ಧೆಯಲ್ಲಿ ಪಾಲ್ಗೊಳ್ಳಬಹುದಾಗಿದೆ. ಈ ಕುರಿತ ಹೆಚ್ಚಿನ ಮಾಹಿತಿಗಾಗಿ ಪ್ರಮೀಳಾ, ಸಹಾಯಕ ಪರಿಸರ ಅಧಿಕಾರಿ, ಪ್ರಾದೇಶಿಕ ಕಛೇರಿ ಉಡುಪಿ (ಮೊಬೈಲ್:9901226279) ಇವರನ್ನು ಸಂಪರ್ಕಿಸುವಂತೆ ಇಲಾಖೆಯ ಪರಿಸರ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.