ರಾಜೀವ್ ಗಾಂಧಿ ಮಾನವ ಸೇವಾ ಪ್ರಶಸ್ತಿಗೆ ಅರ್ಜಿ ಆಹ್ವಾನ

Update: 2018-05-23 15:31 GMT

ಉಡುಪಿ, ಮೇ 23: ಭಾರತ ಸರಕಾರವು ಮಕ್ಕಳ ಸೇವೆಯಲ್ಲಿ ನಿರತರಾದ ವ್ಯಕ್ತಿಗಳಿಗೆ ನೀಡುವ 2018ನೇ ಸಾಲಿನ ರಾಜೀವ್ ಗಾಂಧಿ ಮಾನವ ಸೇವಾ ಪ್ರಶಸ್ತಿ ಹಾಗೂ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ವ್ಯಕ್ತಿ ಹಾಗೂ ಸಂಸ್ಥೆ ಗಳಿಗೆ ನೀಡುವ ರಾಷ್ಟ್ರ ಪ್ರಶಸ್ತಿಗೆ ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗುವ ವ್ಯಕ್ತಿಗಳು ಮಕ್ಕಳ ಶ್ರೇಯೋಭಿವೃದ್ದಿಗಾಗಿ 10 ವರ್ಷಗಳಿಗೂ ಮೇಲ್ಪಟ್ಟು ಕಾರ್ಯನಿರ್ವಹಿಸಿರಬೇಕು. ಸಂಘ ಸಂಸ್ಥೆಗಳಲ್ಲಿ ವೇತನ ಪಡೆಯುತ್ತಿರುವವರು ಪ್ರಶಸ್ತಿಗೆ ಅರ್ಹರಾಗಿರುವುದಿಲ್ಲ. ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ವ್ಯಕ್ತಿಗಳು ಮಾಡಿರುವ ಕೆಲಸದ ಗುಣಮಟ್ಟವೇ ಆಯ್ಕೆಯ ಮಾನದಂಡವಾಗಿರುತ್ತದೆ.
ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗುವ ವ್ಯಕ್ತಿಗಳು ಮಕ್ಕಳ ಶ್ರೇಯೋಭಿವೃದ್ದಿಗಾಗಿ 10 ವರ್ಷಗಳಿಗೂ ಮೇಲ್ಪಟ್ಟು ಕಾರ್ಯನಿರ್ವಹಿಸಿರಬೇಕು. ಸಂಘ ಸಂಸ್ಥೆಗಳಲ್ಲಿ ವೇತನ ಪಡೆಯುತ್ತಿರುವವರು ಪ್ರಶಸ್ತಿಗೆ ಅರ್ಹರಾಗಿರುವುದಿಲ್ಲ. ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ವ್ಯಕ್ತಿಗಳು ಮಾಡಿರುವ ಕೆಲಸದ ಗುಣಮಟ್ಟವೇ ಆಯ್ಕೆಯ ಮಾನದಂಡವಾಗಿರುತ್ತದೆ. 3 ವ್ಯಕ್ತಿಗತ ಪ್ರಶಸ್ತಿ ಹಾಗೂ 5 ಸಂಘ ಸಂಸ್ಥೆಗಳಿಗೆ ಪ್ರಶಸ್ತಿ ನೀಡಲಾಗುವುದು. ವ್ಯಕ್ತಿಗೆ ನೀಡುವ ಪ್ರಶಸ್ತಿ ಒಂದು ಲಕ್ಷ ರೂ. ನಗದು ಹಾಗೂ ಪ್ರಶಸ್ತಿ ಪತ್ರವನ್ನು ಹಾಗೂ ಸಂಘ ಸಂಸ್ಥೆಗಳಿಗೆ ನೀಡುವ ಪ್ರಶಸ್ತಿಯು ಮೂರು ಲಕ್ಷ ರೂ. ನಗದು ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿರುತ್ತದೆ.

ಅರ್ಜಿಗಳನ್ನು ಆಂಗ್ಲ ಭಾಷೆಯಲ್ಲಿ ಭರ್ತಿ ಮಾಡಿ, ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಇವರಿಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಜೂ.10 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:0820-2574972ನ್ನು ಸಂಪರ್ಕಿಸುವಂತೆ ಉಡುಪಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News