ಮೂಡುಬಿದಿರೆ: ಕಾಂಗ್ರೆಸ್, ಜೆಡಿಎಸ್ ವಿಜಯೋತ್ಸವ

Update: 2018-05-23 17:36 GMT

ಮೂಡುಬಿದಿರೆ, ಮೇ.23: ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ಕಾರ್ಯಕರ್ತರು ಪ್ರತ್ಯೇಕವಾಗಿ ಪಟಾಕಿ ಸಿಡಿಸಿ ಕುಮಾರಸ್ವಾಮಿ ಪರ ಘೋಷಣೆ ಕೂಗಿ ವಿಜಯೋತ್ಸವ ಆಚರಿಸಿದರು.

ಕಾಂಗ್ರೆಸ್ ವತಿಯಿಂದ ಪಕ್ಷದ ಕಚೇರಿಯಿಂದ ಬಸ್‌ನಿಲ್ದಾಣದ ವರೆಗೆ ಅಲ್ಲಲ್ಲಿ ಪಟಾಕಿ ಸಿಡಿಸಲಾಯಿತು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಲೇರಿಯನ್ ಸಿಕ್ವೇರಾ, ಪ್ರಧಾನ ಕಾರ್ಯದರ್ಶಿ ರತ್ನಾಕರ ಮೊಯ್ಲಿ, ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುಪ್ರಿಯಾ ಡಿ ಶೆಟ್ಟಿ, ಪುರಸಭಾ ಸದಸ್ಯರಾದ ಸುರೇಶ್ ಕೋಟ್ಯಾನ್, ಕೊರಗಪ್ಪ, ಮೂಡಾ ಅಧ್ಯಕ್ಷ ಸುರೇಶ್ ಪ್ರಭು ಮತ್ತಿತರರು ಉಪಸ್ಥಿತರಿದ್ದರು.

ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ದಿವಾಕರ ಶೆಟ್ಟಿ ನೇತೃತ್ವದಲ್ಲಿ ಜೆಡಿಎಸ್ ಕಚೇರಿಯೆದುರು ಸಿಹಿ ಹಂಚಿ ಪಟಾಕಿ ಸಿಡಿಸಿ ಸಂಭ್ರಮಿಸಲಾಯಿತು. ಹರಿಪ್ರಸಾದ್ ಶೆಟ್ಟಿ, ಹರಿಪ್ರಸಾದ್ ಮಿಜಾರು, ಶೇಖರ್ ಶೆಟ್ಟಿ, ಪೃಥ್ವಿರಾಜ್, ಭಾಸ್ಕರ್ ಆಚಾರ್ಯ ಹೊಸಬೆಟ್ಟು ಮತ್ತಿತರರು ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News