ತೂತುಕುಡಿ ಹಿಂಸಾಚಾರ: ತನಿಖಾ ಆಯೋಗ ರಚನೆ

Update: 2018-05-23 18:24 GMT

ಚೆನ್ನೈ, ಮೇ 22: ತಮಿಳುನಾಡಿನ ತೂತುಕುಡಿಯಲ್ಲಿ ನಡೆದ ಹಿಂಸಾಚಾರ ಘಟನೆಯ ಬಗ್ಗೆ ತನಿಖೆ ನಡೆಸಲು ರಾಜ್ಯ ಸರಕಾರ ಮದ್ರಾಸ್ ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶರ ಇರುವ ಏಕಸದಸ್ಯ ತನಿಖಾ ಆಯೋಗವನ್ನು ರಚಿಸಿದೆ.

ಸ್ಟೆರ್ಲೈಟ್ ಕಂಪೆನಿ ಕಾರ್ಯಾಚರಣೆಯನ್ನು ವಿರೋಧಿಸಿ ತಮಿಳುನಾಡಿನಲ್ಲಿ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದಾಗ ಪೊಲೀಸರು ನಡೆಸಿದ ಗೋಲಿಬಾರ್‌ನಲ್ಲಿ 10 ಜನ ಸಾವನ್ನಪ್ಪಿದ್ದರು.

 ನಿಷೇಧಾಜ್ಞೆಯನ್ನು ಉಲ್ಲಂಘಿಸಿ ಸಾವಿರಾರು ಮಂದಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿದ ಬಳಿಕ ಕಾನೂನು ಸುವ್ಯವಸ್ಥೆಗೆ ಸಂಬಂಧಿಸಿದ ಘಟನೆಯ ಕುರಿತು ತನಿಖಾ ಆಯೋಗ ತನಿಖೆ ನಡೆಸಲಿದೆ ಎಂದು ಸರಕಾರ ಪ್ರಕಟಣೆ ತಿಳಿಸಿದೆ. ನಿವೃತ್ತ ನ್ಯಾಯಾಧೀಶೆ ಅರುಣಾ ಜಗದೀಶನ್ ಅವರಿರುವ ತನಿಖಾ ಆಯೋಗ ತನಿಖೆ ನಡೆಸಿ ಸರಕಾರಕ್ಕೆ ವರದಿ ಸಲ್ಲಿಸಲಿದ್ದಾರೆ ಎಂದು ತಿಳಿಸಲಾಗಿದೆ. ಆದರೆ ವರದಿ ಸಲ್ಲಿಸಲು ಕಾಲಮಿತಿಯನ್ನು ಸರಕಾರ ಸೂಚಿಸಿಲ್ಲ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News