ಪ್ರಾಕೃತಿಕ ವಿಕೋಪ: ನಗರಸಭೆಯಿಂದ ಮುನ್ನೆಚ್ಚರಿಕಾ ಕ್ರಮ
Update: 2018-05-24 19:30 IST
ಉಡುಪಿ, ಮೇ 24:ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಮುಂಗಾರು ಮಳೆ ಅವಧಿಯಲ್ಲಿ ಪ್ರಾಕೃತಿಕ ವಿಕೋಪಗಳು ಸಂಭವಿಸದಂತೆ ತಕ್ಷಣವೇ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದು, ಅದರಂತೆ ಮುಖ್ಯ ಚರಂಡಿಗಳು, ಒಳಚರಂಡಿಗಳು, ನೀರಿನ ತೋಡು, ರಸ್ತೆ ಬದಿಯ ತೋಡುಗಳನ್ನು ಸ್ವಚ್ಛಗೊಳಿಸಿ, ನೀರು ಸರಾಗವಾಗಿ ಹರಿಯುವ ವ್ಯವಸ್ಥೆಯನ್ನು ಮಾಡಲಾಗುತ್ತಿದೆ.
ನಗರಸಭಾ ವ್ಯಾಪ್ತಿಯಲ್ಲಿ ಪ್ರಾಕೃತಿಕ ವಿಕೋಪದಿಂದ ಹಾನಿಗಳು ಸಂಭವಿಸಿದ ಹಾಗೂ ತುರ್ತು ಸಂದರ್ಭಗಳಲ್ಲಿ ಪರಿಹಾರ ಕಾರ್ಯನಿರ್ವಹಿಸಲು ಮೂರು ತಂಡಗಳನ್ನು ರಚಿಸಲಾಗಿದ್ದು, ಸಿಬ್ಬಂದಿಯನ್ನು ನಿಯುಕ್ತಿಗೊಳಿಸಲಾಗಿದೆ. ಇಂಥ ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕರು ನಗರಸಭೆಯ ದೂರು ವಿಭಾಗದ ದೂರವಾಣಿ ಸಂಖ್ಯೆಗೆ (2520306) ದೂರು ನೀಡಿ ನಗರಸಭೆಯೊಂದಿಗೆ ಸಹಕರಿಸುವಂತೆ ಉಡುಪಿ ನಗರಸಭಾ ಪೌರಾಯುಕ್ತರ ಪ್ರಕಟಣೆ ತಿಳಿಸಿದೆ.