ಉಡುಪಿ: ಮೇ 26ರಂದು ತಾಳ್ತಜೆ ಪ್ರಶಸ್ತಿ ಪ್ರದಾನ
ಉಡುಪಿ, ಮೇ 24: ಕನ್ನಡದ ವಿದ್ವಾಂಸರ ಪರಂಪರೆಯನ್ನು ಶ್ರೀಮಂತ ಗೊಳಿಸಿದ ಸಂಶೋಧಕ ಪ್ರೊ. ತಾಳ್ತಜೆ ಕೇಶವ ಭಟ್ಟರ ನೆನಪಿನಲ್ಲಿ ನೀಡಲಾಗುವ ತಾಳ್ತಜೆ ಕೇಶವ ಪ್ರಶಸ್ತಿಯನ್ನು ನಾಡಿನ ಹಿರಿಯ ಸಂಶೋಧಕ ಡಾ.ದೇವರ ಕೊಂಡಾರೆಡ್ಡಿ ಇವರಿಗೆ ಮೇ 26ರ ಶನಿವಾರ ಬೆಳಗ್ಗೆ 10:30ಕ್ಕೆ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟದಲ್ಲಿ ಪ್ರದಾನ ಮಾಡಲಾಗುವುದು.
ಈ ಕಾರ್ಯಕ್ರಮವು ಉಡುಪಿಯ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರ, ಮಣಿಪಾಲ ಅಕಾಡೆಮಿ ಆಪ್ ಹೈಯರ್ ಎಜ್ಯುಕೇಶನ್ ಇದರ ಸಂಯುಕ್ತ ಆಶ್ರಯದಲ್ಲಿ ನಡೆಯಲಿದೆ. ಅಧ್ಯಕ್ಷತೆಯನ್ನು ಅಕಾಡೆಮಿ ಆಫ್ ಜನರಲ್ ಎಜ್ಯುಕೇಷನ್‌ನ ಆಡಳಿತಾಧಿಕಾರಿ ಡಾ. ಎಚ್.ಶಾಂತಾರಾಮ್ ವಹಿಸಲಿದ್ದಾರೆ.
ಪ್ರಶಸ್ತಿ ಪುರಸ್ಕೃತರ ಕುರಿತು ಡಾ.ಎಚ್.ಜಿ. ಶ್ರೀಧರ ಪುತ್ತೂರು ಅಭಿನಂದನಾ ಭಾಷಣ ಮಾಡಲಿದ್ದಾರೆ. ಉಜಿರೆಯ ಡಾ. ಬಿ.ಪಿ ಸಂಪತ್ ಕುಮಾರ್ ‘ಜೈನ ಧರ್ಮದಲ್ಲಿ ಭವಾವಳಿಯ ಪರಿಕಲ್ಪನೆ’ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ. ಕೇಶವ ಪ್ರಶಸ್ತಿ ಸಮಿತಿ ಸದಸ್ಯರಾದ ಪ್ರೊ. ತಾಳ್ತಜೆ ವಸಂತ ಕುಮಾರ್ ಹಾಗೂ ಟಿ.ಕೆ. ರಘುಪತಿ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.