×
Ad

ವಿಧಾನಪರಿಷತ್‌ಗೆ ಆಯ್ಕೆ ಮಾಡುವಂತೆ ಮುಖ್ಯಮಂತ್ರಿ ಚಂದ್ರು ಮನವಿ

Update: 2018-05-24 20:44 IST

ಬೆಂಗಳೂರು, ಮೇ 24: ನಾಡು, ನುಡಿಗಾಗಿ ಸೇವೆ ಸಲ್ಲಿಸುತ್ತಿರುವ ನನ್ನನ್ನು ವಿಧಾನಪರಿಷತ್‌ನ ಸದಸ್ಯ ಸ್ಥಾನಕ್ಕೆ ಆಯ್ಕೆ ಮಾಡಬೇಕೆಂದು ಉಪಮುಖ್ಯ ಮಂತ್ರಿ ಡಾ.ಜಿ.ಪರಮೇಶ್ವರ್‌ಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಾ.ಮುಖ್ಯಮಂತ್ರಿ ಚಂದ್ರು ಮನವಿ ಮಾಡಿದ್ದಾರೆ.

ಕಳೆದ ಮೂರು-ನಾಲ್ಕು ದಶಕಗಳಿಂದ ರಂಗಭೂಮಿ, ಚಲನಚಿತ್ರ, ಸೇರಿದಂತೆ ಸಾಮಾಜಿಕ ಕಾರ್ಯಗಳಲ್ಲಿ ಸದಾ ತೊಡಗಿಸಿಕೊಂಡಿದ್ದೇನೆ. 1985ರ ವಿಧಾನಸಭಾ ಚುನಾವಣೆಯಲ್ಲಿ ಗೌರಿಬಿದನೂರು ಕ್ಷೇತ್ರದಿಂದ ಶಾಸಕನಾಗಿ ಆಯ್ಕೆಯಾಗಿ ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಶ್ರಮಿಸಿದ್ದೇನೆ. ವಿಧಾನ ಪರಿಷತ್ ಸದಸ್ಯನಾಗಿ ಎರಡು ಬಾರಿ ಆಯ್ಕೆಯಾಗಿ, ಪರಿಷತ್‌ನ ವಿರೋಧ ಪಕ್ಷದ ಉಪನಾಯಕನಾಗಿ ಸೇವೆ ಸಲ್ಲಿಸಿ ಪರಿಷತ್‌ನ ಘನತೆಯನ್ನು ಎತ್ತಿ ಹಿಡಿದಿದ್ದೇನೆ. ಹೀಗಾಗಿ ಮತ್ತೆ ವಿಧಾನಪರಿಷತ್‌ನ ಸದಸ್ಯನಾಗಿ ಆಯ್ಕೆ ಜನರ ಸಮಸ್ಯೆಗಳಿಗೆ ಧ್ವನಿಯಾಗಲು ಬಯಸಿದ್ದೇನೆ.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷನಾಗಿದ್ದ ವೇಳೆಯಲ್ಲಿ ರಾಜ್ಯದ ನಾಡು, ನುಡಿ, ಗಡಿ ಸೇರಿದಂತೆ ಸಾಹಿತ್ಯ, ಸಂಸ್ಕೃತಿ ವಿಷಯದಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ರಾಷ್ಟ್ರೀಯ ಭಾಷಾನೀತಿ, ರಾಷ್ಟ್ರೀಯ ಜಲನೀತಿ, ಉದ್ಯೋಗ ನೀತಿ, ಸೇರಿದಂತೆ ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ದೊರಕಿಸುವ ನಿಟ್ಟಿನಲ್ಲಿ ರಚನಾತ್ಮಕವಾಗಿ ಕಾರ್ಯ ನಿರ್ವಹಿಸಿದ್ದೇನೆ. ಇವೆಲ್ಲವನ್ನು ಪರಿಗಣಿಸಿ ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಕಲ್ಪಿಸಿಕೊಡಬೇಕೆಂದು ಮುಖ್ಯಮಂತ್ರಿ ಚಂದ್ರು ಪತ್ರಿಕಾ ಹೇಳಿಕೆಯಲ್ಲಿ ಮನವಿ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News