×
Ad

ಬೆಂಗಳೂರು: ಯುವಕನ ಕೊಲೆ ಪ್ರಕರಣ; ಐವರ ಬಂಧನ

Update: 2018-05-24 20:49 IST

ಬೆಂಗಳೂರು, ಮೇ 24: ಯುವಕನೊಬ್ಬನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆಗೈದಿದ್ದ ಪ್ರಕರಣ ಸಂಬಂಧ ಐದು ಜನರನ್ನು ಬಂಧಿಸುವಲ್ಲಿ ವೈಟ್‌ಫೀಲ್ಡ್ ವಿಭಾಗದ ವರ್ತೂರು ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ.

ನಗರದ ಸುಬ್ಬನ್‌ಪಾಳ್ಯದ ಡೇವಿಡ್‌ಜಾನ್(29), ರಾಮಸ್ವಾಮಿ ಪಾಳ್ಯದ ವಿ.ಕಿಶೋರ್ ಕುಮಾರ್, ನವೀನ್‌ಕುಮಾರ್, ಅಂತರಾಜ್ ಹಾಗೂ ಅಂತೋಣಿ ಇನ್‌ಫ್ಯಾಂಟ್ ಬಂಧಿತ ಆರೋಪಿಗಳೆಂದು ವೈಟ್‌ಫೀಲ್ಡ್ ವಿಭಾಗದ ಡಿಸಿಪಿ ಅಬ್ದುಲ್ ಅಹದ್ ತಿಳಿಸಿದ್ದಾರೆ.

ಪ್ರಕರಣದ ವಿವರ: ಮೇ 17ರ ರಾತ್ರಿ 11 ಗಂಟೆ ಸುಮಾರಿಗೆ ಚಲ್ಲಕುಮಾರ್ ಎಂಬಾತನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆಗೈದಿದ್ದರು. ಈ ಸಂಬಂಧ ಡಿಸಿಪಿಗಳಾದ ಅಬ್ದುಲ್ ಅಹದ್, ಅನುಚೇತನ್ ಅವರ ಮಾರ್ಗದರ್ಶನದಲ್ಲಿ ತನಿಖೆ ಕೈಗೊಂಡ ಪೊಲೀಸರ ತಂಡ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿಗಳ ವಿರುದ್ಧ ಇಲ್ಲಿನ ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ವಿವಿಧ ಪ್ರಕರಣಗಳು ದಾಖಲಾಗಿದ್ದು, ತನಿಖೆ ಮುಂದುವರೆಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News