×
Ad

ವಿಧಾನ ಪರಿಷತ್ ಚುನಾವಣೆ: ಮೂರು ಕ್ಷೇತ್ರಗಳಿಂದ 31 ಅಭ್ಯರ್ಥಿಗಳು ಕಣದಲ್ಲಿ

Update: 2018-05-24 21:54 IST

ಮೈಸೂರು,ಮೇ.25: ಕರ್ನಾಟಕ ವಿಧಾನಪರಿಷತ್ ಸ್ಥಾನಕ್ಕೆ ನಡೆಯುತ್ತಿರುವ ಮೂರು ಕ್ಷೇತ್ರಗಳ ಚುನಾವಣೆಯಲ್ಲಿ ಒಂದು ನಾಮಪತ್ರ ತಿರಸ್ಕೃತಗೊಂಡಿದ್ದು, ಇನ್ನುಳಿದ ಎಲ್ಲಾ ನಾಮಪತ್ರಗಳು ಕ್ರಮಬದ್ಧವಾಗಿದ್ದು, ಯಾರು ನಾಮಪತ್ರ ವಾಪಸ್ ಪಡೆದಿಲ್ಲ ಎಂದು ಹೇಳಲಾಗಿದೆ.

ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರ, ಕರ್ನಾಟಕ ನೈರುತ್ಯ ಶಿಕ್ಷಕರ ಕ್ಷೇತ್ರ, ಕರ್ನಾಟಕ ನೈರುತ್ಯ ಪದವೀಧರರ ಕ್ಷೇತ್ರಗಳಿಗೆ ಜೂ. 8 ರಂದು ಚುನಾವಣೆ ನಡೆಯಲಿದ್ದು, ಜೂ.12 ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.

ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರದದಿಂದ ಹಾಲಿ ವಿಧಾನ ಪರಿಷತ್ ಸದಸ್ಯ ವಿಧಾನ ಪರಿಷತ್ ಉಪಸಭಾಪತಿ ಮರಿತಿಬ್ಬೇಗೌಡ ಪುನರ್ ಆಯ್ಕೆ ಬಯಸಿದ್ದು,  ಕಾಂಗ್ರೆಸ್ ಪಕ್ಷದಿಂದ ಲಕ್ಷ್ಮಣ್, ಬಿಜೆಪಿಯಿಂದ ಸಿ.ಎಸ್.ನಿರಂಜನಮೂರ್ತಿ ಸೇರಿದಂತೆ ಹತ್ತು ಮಂದಿ ಕಣದಲ್ಲಿ ಉಳಿದಿದ್ದಾರೆ.

ಕರ್ನಾಟಕ ನೈರುತ್ಯ ಪದವೀದರರ ಕ್ಷೇತ್ರದಿಂದ ಎಂಟು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, ಎಲ್ಲಾ ನಾಮಪತ್ರಗಳು ಕ್ರಮಬದ್ಧವಾಗಿದ್ದು, ಯಾವುದೇ ನಾಮಪತ್ರ ವಾಪಸ್ ಪಡೆದಿಲ್ಲ.

ಕರ್ನಾಟಕ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ 14 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, ಪಕ್ಷೇತರ ಅಭ್ಯರ್ಥಿ ಶರವಣ ಅವರ ನಾಮಪತ್ರ ತಿರಸ್ಕಕೃತಗೊಂಡಿದ್ದು, ಇನ್ನುಳಿದ 13 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧವಾಗಿದೆ ಎಂದು ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News