ಆತ್ಮಹತ್ಯೆಗೆ ಶರಣಾದ ಸಾಮೂಹಿಕ ಅತ್ಯಾಚಾರಕ್ಕೊಳಗಾದ ಬಾಲಕಿ
Update: 2018-05-24 23:00 IST
ಕಟಕ್, ಮೇ 24: ಆರು ಮಂದಿಯಿಂದ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾದ 16 ವರ್ಷದ ಹುಡುಗಿಯೊಬ್ಬಳು ಬಳಿಕ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಬಲ್‌ಪುರ ಜಿಲ್ಲೆಯಲ್ಲಿ ನಡೆದಿದೆ.
9ನೇ ತರಗತಿಯ ವಿದ್ಯಾರ್ಥಿನಿಯಾಗಿರುವ ಬಾಲಕಿಯನ್ನು ಕಳೆದ 3ರಂದು ಆರು ಮಂದಿ ಸೇರಿ ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಆ ಬಳಿಕ ಆಕೆ ತೀವ್ರ ಖಿನ್ನಳಾಗಿದ್ದಳು. ಆದರೆ ತನಿಖೆಯಲ್ಲಿ ಸಹಕರಿಸುತ್ತಿದ್ದ ಹಿನ್ನೆಲೆಯಲ್ಲಿ ಆರೋಪಿಗಳ ವಿರುದ್ಧ ಆರೋಪಪಟ್ಟಿ ದಾಖಲಿಸಲಾಗಿತ್ತು. ಬಾಲಾಪರಾಧಿಯೂ ಸೇರಿದಂತೆ ಎಲ್ಲಾ ಆರೋಪಿಗಳನ್ನೂ ಬಂಧಿಸಲಾಗಿದೆ.
ಬಾಲಕಿಗೆ ಸಂತ್ರಸ್ತರ ಪರಿಹಾರ ಯೋಜನೆಯಡಿ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಲಾಗಿತ್ತು. ಆದರೆ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.