ಸ್ಪೀಕರ್ ಹುದ್ದೆ ಸ್ಪರ್ಧೆಯಿಂದ ಬಿಜೆಪಿಯ ಸುರೇಶ್ ಕುಮಾರ್ ಹಿಂದಕ್ಕೆ

Update: 2018-05-25 06:53 GMT

ಬೆಂಗಳೂರು, ಮೇ 25: ವಿಧಾನಸಭೆಯ ಸ್ಪೀಕರ್ ಹುದ್ದೆಗೆ ಸಲ್ಲಿಸಿದ್ದ ನಾಮಪತ್ರವನ್ನು ಹಿಂಪಡೆಯುವುದಾಗಿ ಬಿಜೆಪಿ ಅಭ್ಯರ್ಥಿ ಎಸ್.ಸುರೇಶ್ ಕುಮಾರ್ ಟ್ವೀಟರ್ ಮೂಲಕ ಮಾಹಿತಿ ನೀಡಿದ್ದಾರೆ.

 ಸುರೇಶ್ ಕುಮಾರ್ ಈ ಮಾಹಿತಿ ನೀಡಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್‌ನ ಮೈತ್ರಿಕೂಟದ ಒಮ್ಮತದ ಅಭ್ಯರ್ಥಿ ರಮೇಶ್ ಕುಮಾರ್ ಅವರು ವಿಧಾನಸಭೆಯ ನೂತನ ಸ್ಪೀಕರ್ ಆಗಿ ಅವಿರೋಧವಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News