×
Ad

ಬೆಂಗಳೂರು : ಮಕ್ಕಳ ಕಳ್ಳರೆಂದು ಕೂಲಿ ಕಾರ್ಮಿಕರ ಮೇಲೆ ಹಲ್ಲೆ ನಡೆಸಿದ ಸಾರ್ವಜನಿಕರು

Update: 2018-05-25 18:40 IST

ಬೆಂಗಳೂರು, ಮೇ 25: ರಾಜ್ಯದಲ್ಲಿ ಮಕ್ಕಳ ಕಳ್ಳರ ವದಂತಿ ಹೆಚ್ಚುತ್ತಿದ್ದು, ಅಮಾಯಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಗುರುವಾರ ರಾತ್ರಿ ಮಕ್ಕಳ ಕಳ್ಳತನಕ್ಕೆ ಬಂದಿದ್ದಾರೆಂದು ಮೂವರು ಮಹಿಳೆಯರ ಮೇಲೆ ಮುಗಿಬಿದ್ದ ಸಾರ್ವಜನಿಕರು ಹಲ್ಲೆ ನಡೆಸಿ, ಪೊಲೀಸರಿಗೆ ಒಪ್ಪಿಸಿದ್ದಾರೆ.

ವಡೇರಳ್ಳಿ ಬಳಿಯ ಲಕ್ಷ್ಮೀಪುರ ಕ್ರಾಸ್ ಬಳಿ ಕೆಲ ಮಹಿಳೆಯರು ಅನುಮಾನಾಸ್ಪದವಾಗಿ ಓಡಾಡುತ್ತಿದ್ದಾಗ ಸಾರ್ವಜನಿಕರು ಹಿಡಿದು ಹಲ್ಲೆ ನಡೆಸಿದ್ದಾರೆ. ಮಹಿಳೆಯರನ್ನು ವಿದ್ಯಾರಣ್ಯಪುರ ಪೊಲೀಸರು ಕರೆದೊಯ್ದು ವಿಚಾರಣೆ ನಡೆಸಿದಾಗ, ಬಾಡಿಗೆ ಮನೆ ಹುಡುಕುತ್ತಿರುವುದಾಗಿ ಅಳಲು ತೋಡಿಕೊಂಡಿದ್ದಾರೆ.

ಟ್ಯಾನರಿ ರಸ್ತೆ, ಪುಲಿಕೇಶಿನಗರ, ಶಿವಾಜಿನಗರದಲ್ಲೂ ಮಕ್ಕಳ ಕಳ್ಳರ ವದಂತಿ ಹಬ್ಬಿದ್ದು, ಬಿಹಾರ ಮೂಲದ ವ್ಯಕ್ತಿಯೊಬ್ಬರನ್ನು ಹಿಡಿದು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಫ್ರೇಜರ್‌ಟೌನ್ ರೈಲ್ವೆಟ್ರಾಕ್ ಬಳಿ ಮಕ್ಕಳನ್ನು ಅನುಮಾನಾಸ್ಪದವಾಗಿ ಕರೆದೊಯ್ಯುತ್ತಿದ್ದರು ಎಂದು ಸ್ಥಳೀಯರು ಆರೋಪಿಸಿದ್ದಾರೆ. ಅಲ್ಲದೆ, ಓರ್ವ ವ್ಯಕ್ತಿ ಮತ್ತು ಜೊತೆಯಲ್ಲಿದ್ದ ಇಬ್ಬರು ಮಹಿಳೆಯನ್ನು ಪುಲಿಕೇಶಿನಗರ ಪೊಲೀಸರಿಗೆ ಒಪಿ್ಪಸಿದ್ದು, ವಿಚಾರಣೆ ಮುಂದುವರಿದಿದೆ.

ಮಕ್ಕಳ ಕಳ್ಳರು ಸಿಕ್ಕಿದ್ದಾರೆ ಎಂಬ ವದಂತಿ ವಿಚಾರ ತಿಳಿಯುತ್ತಿದ್ದಂತೆ ಜನ ಬೀದಿಗಿಳಿದರು. ಪರಿಸ್ಥಿತಿ ಹತೋಟಿಗೆ ತರಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ.

ಹಲ್ಲೆಯಿಂದ ಗಾಯಗೊಂಡಿರುವ ವ್ಯಕ್ತಿಯನ್ನು ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರು ಮಹಿಳೆಯರನ್ನು ಪುಲಿಕೇಶಿನಗರ ಪೊಲೀಸರು ವಿಚಾರಣೆಗೊಳಪಡಿಸಿದ್ದು, ಕೂಲಿಗಾಗಿ ಬೆಂಗಳೂರಿಗೆ ಬಂದ ಬಿಹಾರ ಮೂಲದವರು ಎನು್ನವುದು ತನಿಖೆ ವೇಳೆ ಗೊತ್ತಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News