×
Ad

​ಶಿಕ್ಷಕರ ಸಮಸ್ಯೆಗಳಿಗೆ ಪರಿಹಾರಕ್ಕೆ ಪ್ರಯತ್ನ: ಎಸ್.ಎಲ್. ಬೋಜೇಗೌಡ

Update: 2018-05-25 18:49 IST

ಮಂಗಳೂರು, ಮೇ 25: ಜೂನ್ 8ರಂದು ನಡೆಯುವ ಕರ್ನಾಟಕ ವಿಧಾನ ಪರಿಷತ್ ಚುನಾವಣೆಯಲ್ಲಿ ನೈಋತ್ಯ ಶಿಕ್ಷಕರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದು, ಶಿಕ್ಷಕರ ಸಮಸ್ಯೆಗಳಿಗೆ ನ್ಯಾಯಸಮ್ಮತ ಪರಿಹಾರವನ್ನು ಒದಗಿಸಲು ಪ್ರಯತ್ನಿಸುವುದಾಗಿ ಜೆಡಿಎಸ್‌ನ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್.ಎಲ್.ಬೋಜೇಗೌಡ ಹೇಳಿದ್ದಾರೆ.

ಶುಕ್ರವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದುವರೆಗೆ ಶಿಕ್ಷಕ ಕ್ಷೇತ್ರವನ್ನು ಪ್ರತಿನಿಧಿಸಿ ಆಯ್ಕೆಯಾದ ಎಂಎಲ್‌ಸಿಗಳು ಶಿಕ್ಷಕರಿಗೆ ನ್ಯಾಯ ಕೊಡಿಸುವ ಯಾವುದೇ ಪ್ರಯತ್ನ ಮಾಡಿಲ್ಲ. ರಾಷ್ಟ್ರೀಯ ಪಿಂಚಣಿ ಯೋಜನೆಯ ಬಗ್ಗೆಯೂ ಯಾರೂ ಧ್ವನಿ ಎತ್ತಿಲ್ಲ. ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವೂ ದೊರಕುತ್ತಿಲ್ಲ. ಶಿಕ್ಷಕರ ಸಮಸ್ಯೆಗಳ ಬಗ್ಗೆ ಗಮನ ಹರಿಸಿಲ್ಲ ಎಂದರು.

ಚಿಕ್ಕಮಗಳೂರು, ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ದಾವಣಗೆರೆಯನ್ನು ಒಳಗೊಂಡ ನೈಋತ್ಯ ಕ್ಷೇತ್ರದಲ್ಲಿ ಈ ಬಾರಿ ಬದಲಾವಣೆ ನಿಶ್ಚಿತ. ಈ ಹಿಂದೆಯೂ ತಾನು ಸ್ಪರ್ಧಿಸಿದ್ದು, ಈ ಬಾರಿ ಜಯಗಳಿಸುವ ವಿಶ್ವಾಸವಿದೆ ಎಂದರು.

ಶಿಕ್ಷಣ ಕ್ಷೇತ್ರದಲ್ಲಿನ ಬಹಳಷ್ಟು ಸಮಸ್ಯೆಗಳಿಗೆ ಪರಿಹಾರ ಒದಗಿಸಬೇಕಿದೆ. ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಪಿಯುಸಿ ತರಗತಿಗಳನ್ನು ಅತಿ ಬೇಗನೆ ಆರಂಭಿಸಲಾಗಿದೆ. ಇದರಿಂದ ಶಿಕ್ಷಕರಿಗೆ ರಜೆಯೇ ಇಲ್ಲದಂತಾಗಿದೆ. ವರ್ಷಪೂರ್ತಿ ದುಡಿಯಬೇಕಾದ ಸ್ಥಿತಿ ಶಿಕ್ಷಕರಾದ್ದಾಗಿದೆ. ಶಿಕ್ಷಣ ಇಲಾಖೆ ರಜಾ ರಹಿತ ಇಲಾಖೆಯಾಗಿ ಮಾರ್ಪಟ್ಟಿರುವುದು

ದುರದೃಷ್ಟಕರ. ಇನ್ನೂ ಹೊಸ ಪಠ್ಯ ಪುಸ್ತಕಗಳು ಹೊರಬರದಿದ್ದರೂ ಶಾಲೆ ಆರಂಭಗೊಂಡಿದೆ. ಮುಖ್ಯಮಂತ್ರಿ ಕುಮಾರಸ್ವಾಮಿಯವರು ಪ್ರಣಾಳಿಕೆಯಲ್ಲಿ ಹೇಳಿದ ಎಲ್ಲಾ ಅಂಶಗಳನ್ನು ಜಾರಿಗೆ ತರಲಿದ್ದಾರೆ. ಶಿಕ್ಷಣ ಕ್ಷೇತ್ರದ ಸಮಸ್ಯೆಗಳಿಗೂ ಸ್ಪಂದಿಸಲಿದ್ದಾರೆ ಎಂದು ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಪದವೀಧರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಅರುಣ್ ಕುಮಾರ್, ಮಾಜಿ ಸಚಿವ ಕೆ.ಅಮರನಾಥ ಶೆಟ್ಟಿಘಿ,ಜೆಡಿಎಸ್ ದ.ಕ.ಜಿಲ್ಲಾಧ್ಯಕ್ಷ ಮುಹಮ್ಮದ್ ಕುಂಞಿ, ಪ್ರಮುಖರಾದ ಸುಶೀಲ್ ನೊರೋನ್ಹಾ, ವಸಂತ ಪೂಜಾರಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News