ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಾಗಾಲ್ಯಾಂಡ್ ರಾಜ್ಯಪಾಲ ಕುಟುಂಬ
Update: 2018-05-25 19:15 IST
ಉಡುಪಿ, ಮೇ 25: ಉಡುಪಿ ಮೂಲದ ನಾಗಾಲ್ಯಾಂಡ್ ರಾಜ್ಯಪಾಲರಾದ ಪದ್ಮನಾಭ ಆಚಾರ್ಯ ಅವರು ಕುಟುಂಬ ಸಮೇತರಾಗಿ ಶುಕ್ರವಾರ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಕೃಷ್ಣ ದರ್ಶನ ಪಡೆದರು. ಬಳಿಕ ಪರ್ಯಾಯ ಪಲಿಮಾರು ಮಠದ ಶ್ರೀವಿದ್ಯಾಧೀಶ ತೀರ್ಥ ಶ್ರೀ ಅವರಿಂದ ಅನುಗ್ರಹ ಮಂತ್ರಾಕ್ಷತೆ ಸ್ವೀಕರಿಸಿದರು.