ಜೆಎಸ್‌ಎಸ್ ವಿಶೇಷ ಚೇತನರ ಪಾಲಿಟೆಕ್ನಿಕ್‌ಗೆ ಅರ್ಜಿ ಆಹ್ವಾನ
Update: 2018-05-25 19:19 IST
ಉಡುಪಿ, ಮೇ 25: ಮೈಸೂರಿನಲ್ಲಿ ವಿಶೇಷ ಚೇತನರಿಗೆ ಡಿಪ್ಲೋಮ ಮಟ್ಟದಲ್ಲಿ ತಾಂತ್ರಿಕ ಶಿಕ್ಷಣ ಸೌಲ್ಯ ಕಲ್ಪಿಸುವ ಉದ್ದೇಶದಿಂದ, ಜೆಎಸ್‌ಎಸ್ ಮಹಾವಿದ್ಯಾಪೀಠವು ಜೆಎಸ್‌ಎಸ್ ವಿಶೇಷ ಚೇತನರ ಪಾಲಿಟೆಕ್ನಿಕ್ ಸ್ಥಾಪನೆ ಮಾಡಿದ್ದು, ಉಡುಪಿ ಜಿಲ್ಲಾ ವ್ಯಾಪ್ತಿಯ ಎಸೆಸೆಲ್ಸಿ ಉತ್ತೀರ್ಣರಾದ ವಿಶೇಷ ಚೇತನ ವಿದ್ಯಾರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜೂ.15 ಕೊನೆಯ ದಿನವಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್:www.jsspda.org ಹಾಗೂ ದೂರವಾಣಿ ಸಂ.: 0821-2548315, 548316ನ್ನು ಸಂಪರ್ಕಿಸುವಂತೆ ಮೈಸೂರಿನ ಜೆಎಸ್‌ಎಸ್ ವಿಶೇಷ ಚೇತನರ ಪಾಲಿಟೆಕ್ನಿಕ್‌ನ ಪ್ರಾಂಶುಪಾಲರ ಪ್ರಕಟಣೆ ತಿಳಿಸಿದೆ.