ಉಡುಪಿ: ವಿಶ್ವ ಪರಿಸರ ದಿನಾಚರಣೆಯಲ್ಲಿ ಬೀಚ್ ಸ್ವಚ್ಛತೆಗೆ ಆದ್ಯತೆ
ಉಡುಪಿ, ಮೇ 25: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಜೂನ್ 2,3, 4 ಮತ್ತು 5ರಂದು ಜಿಲ್ಲೆಯ ಪಡುಬಿದ್ರೆ, ಕಾಪು, ಮಲ್ಪೆ ಮತ್ತು ತ್ರಾಸಿ- ಮರವಂತೆಯಲ್ಲಿ ಪ್ರವಾಸೋದ್ಯಮ ಇಲಾಖೆ, ಇತರ ಇಲಾಖೆಗಳ ಸಹಯೋಗ ದೊಂದಿಗೆ ಈ ದಿನವನ್ನು ಅರ್ಥಪೂರ್ಣವಾಗಿಆಚರಿಸಲು ಅಪರ ಜಿಲ್ಲಾಧಿಕಾರಿ ಅನುರಾಧ ಅಧ್ಯಕ್ಷತೆಯಲ್ಲಿ ಶುಕ್ರವಾರ ಪೂರ್ವಭಾವಿ ಸಭೆಯೊಂದು ಮಣಿಪಾಲದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯಿತು.
ಜೂ.2ರಂದು ಪಡುಬಿದ್ರೆಯಲ್ಲಿ ಬೆಳಗ್ಗೆ 7 ಗಂಟೆಗೆ ಬೀಚ್ ಸ್ವಚ್ಛತೆಯೊಂದಿಗೆ ಪ್ರಾರಂಭಗೊಳ್ಳುವ ಕಾರ್ಯಕ್ರಮ ಸ್ಥಳೀಯರ ಸಹಕಾರದೊಂದಿಗೆ ವಿದ್ಯಾರ್ಥಿ ಸಮುದಾಯವನ್ನು ಒಳಗೊಂಡು ಪರಿಸರದ ಮೇಲೆ ಪ್ಲಾಸ್ಟಿಕ್ ಬೀರುವ ಹಾನಿಗಳ ಬಗ್ಗೆ, ಸಾಗರ ಸಂರಕ್ಷಣೆಯ ಅಗತ್ಯ, ಪರಿಸರ ಸಂರಕ್ಷಣೆಯ ಅಗತ್ಯದ ಬಗ್ಗೆ ಮಾಹಿತಿ ಹಂಚಿಕೆ ಹಾಗೂ ಮನರಂಜನೆ ಕಾರ್ಯ್ರಮಗಳು ನಡೆಯಲಿವೆ.
ಬೀಚ್ ನಿರ್ವಹಣ ಸಮಿತಿಗೆ ಈ ಬಾರಿ ಹೆಚ್ಚಿನ ಹೊಣೆಯನ್ನು ನೀಡಲಾ ಗಿದ್ದು, ಸಮಿತಿಗಳು ಕಾರ್ಯಕ್ರಮದ ಬಗ್ಗೆ ಸ್ಥಳೀಯರ ಪಾಲ್ಗೊಳ್ಳುವಿಕೆ ಹಾಗೂ ಪ್ರಚಾರ ಮಾಡುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಅಪರ ಜಿಲ್ಲಾಧಿಕಾರಿಗಳು ತಿಳಿಸಿದರು.
ಬೀಚ್ ನಿರ್ವಹಣ ಸಮಿತಿಗೆ ಈ ಬಾರಿ ಹೆಚ್ಚಿನ ಹೊಣೆಯನ್ನು ನೀಡಲಾ ಗಿದ್ದು, ಸಮಿತಿಗಳು ಕಾರ್ಯಕ್ರಮದ ಬಗ್ಗೆ ಸ್ಥಳೀಯರ ಪಾಲ್ಗೊಳ್ಳುವಿಕೆ ಹಾಗೂ ಪ್ರಚಾರ ಮಾಡುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಅಪರ ಜಿಲ್ಲಾಧಿಕಾರಿಗಳು ತಿಳಿಸಿದರು. ಈಗಾಗಲೇ ಜಿಲ್ಲೆ ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆಯಲ್ಲಿ ಮುಂಚೂಣಿ ಯಲ್ಲಿದ್ದು, ಸ್ಥಳೀಯ ಎಸ್‌ಎಲ್‌ಆರ್‌ಎಂ ಘಟಕ ಹಾಗೂ ಗ್ರಾಪಂಯನ್ನು ವಿಶ್ವಾಸಕ್ಕೆ ತೆಗೆದುಕೊಂಡರೆ ಸ್ವಚ್ಛತೆ ಇನ್ನಷ್ಟು ಪರಿಣಾಮಕಾರಿಯಾಗಲಿದೆ ಎಂದು ಜಿಪಂನ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್ ಹೇಳಿದರು.
ಈಗಾಗಲೇ ಜಿಲ್ಲೆ ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆಯಲ್ಲಿ ಮುಂಚೂಣಿ ಯಲ್ಲಿದ್ದು, ಸ್ಥಳೀಯ ಎಸ್‌ಎಲ್‌ಆರ್‌ಎಂ ಘಟಕ ಹಾಗೂ ಗ್ರಾಪಂಯನ್ನು ವಿಶ್ವಾಸಕ್ಕೆ ತೆಗೆದುಕೊಂಡರೆ ಸ್ವಚ್ಛತೆ ಇನ್ನಷ್ಟು ಪರಿಣಾಮಕಾರಿಯಾಗಲಿದೆ ಎಂದು ಜಿಪಂನ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್ ಹೇಳಿದರು. ಪರಿಸರ ಮಾಲಿನ್ಯ ನಿಯಂತ್ರಣಾಧಿಕಾರಿ ಲಕ್ಷ್ಮೀಕಾಂತ್ ಮಾತನಾಡಿ, ಜೂನ್ 5ರಂದು ತ್ರಾಸಿಯಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಸುಮಾರು 600 ವಿದ್ಯಾರ್ಥಿಗಳು ಜಾಥಾದಲ್ಲಿ ಪಾಲ್ಗೊಳ್ಳುವರು. ಅಲ್ಲಿನ ತ್ರಾಸಿ ಸಭಾಭವನದಲ್ಲಿ ಸಭಾ ಕಾರ್ಯಕ್ರಮ ಹಾಗೂ ಪರಿಸರ ಸಂಬಂಧಿ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಣೆ ನಡೆಯಲಿದೆ ಎಂದರು.
ಪರಿಸರ ಮಾಲಿನ್ಯ ನಿಯಂತ್ರಣಾಧಿಕಾರಿ ಲಕ್ಷ್ಮೀಕಾಂತ್ ಮಾತನಾಡಿ, ಜೂನ್ 5ರಂದು ತ್ರಾಸಿಯಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಸುಮಾರು 600 ವಿದ್ಯಾರ್ಥಿಗಳು ಜಾಥಾದಲ್ಲಿ ಪಾಲ್ಗೊಳ್ಳುವರು. ಅಲ್ಲಿನ ತ್ರಾಸಿ ಸಾವನದಲ್ಲಿ ಸಾಕಾರ್ಯಕ್ರಮಹಾಗೂಪರಿಸರಸಂಬಂಧಿರ್ಸ್ಪೆಗಳ ವಿಜೇತರಿಗೆ ಬಹುಮಾನ ವಿತರಣೆ ನಡೆಯಲಿದೆ ಎಂದರು. ಸಭೆಯಲ್ಲಿ ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕಿ ಅನಿತಾ, ನಗರಸಭೆ ಪೌರಾಯುಕ್ತ ಜೆ.ಸಿ.ಜನಾರ್ದನ್, ಶಿಕ್ಷಣ ಇಲಾಖೆ ಅಧಿಕಾರಿಗಳು, ನಿರ್ಮಿತಿ ಕೇಂದ್ರದ ಸಚಿನ್, ಕಾಪು ಬೀಚ್ ನಿರ್ವಹಣಾಧಿಕಾರಿ ಯತೀಶ್ ಬೈಕಂಪಾಡಿ, ಮಲ್ಪೆ, ತ್ರಾಸಿ, ಮರವಂತೆ ಬೀಚ್ ನಿರ್ವಹಣಾಧಿಕಾರಿ ಸುದೇಶ್ ಶೆಟ್ಟಿ ಸಭೆಯಲ್ಲಿ ಭಾಗವಹಿಸಿದ್ದರು.