ಬಿ.ಎಸ್.ಯಡಿಯೂರಪ್ಪ ವಿಧಾನಸಭೆ ವಿಪಕ್ಷ ನಾಯಕ: ಸ್ಪೀಕರ್ ಕೆ.ಆರ್.ರಮೇಶ್‌ಕುಮಾರ್ ಪ್ರಕಟ
Update: 2018-05-25 19:49 IST
ಬೆಂಗಳೂರು, ಮೇ 25: ವಿಧಾನಸಭೆ ಪ್ರತಿಪಕ್ಷ ನಾಯಕರಾಗಿ ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಆಯ್ಕೆಯಾಗಿದ್ದು, ವಿಧಾನಸಭೆ ಅವರಿಗೆ ಮಾನ್ಯತೆ ನೀಡಿದೆ ಎಂದು ವಿಧಾನಸಭೆ ಸ್ಪೀಕರ್ ಕೆ.ಆರ್.ರಮೇಶ್‌ಕುಮಾರ್ ಪ್ರಕಟಿಸಿದ್ದಾರೆ.
ಶುಕ್ರವಾರ ವಿಧಾನಸಭೆಯಲ್ಲಿ ನೂತನ ಸ್ಪೀಕರ್ ಆಯ್ಕೆ ಕಲಾಪದ ಬಳಿಕ ರಮೇಶ್ ಕುಮಾರ್ ಅವರು ಈ ವಿಷಯವನ್ನು ಪ್ರಕಟಿಸಿದರು. ಗೋವಿಂದ ಕಾರಜೋಳ ಅವರು ಪ್ರತಿಪಕ್ಷದ ಉಪ ನಾಯಕನಾಗಿರುತ್ತಾರೆ ಎಂದು ಅಧಿಕೃತವಾಗಿ ಘೋಷಣೆ ಮಾಡಿದರು.