×
Ad

ಕನ್ನಡ ಕಲಿಕೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ‘ಪ್ರತಿಭಾ ಪುರಸ್ಕಾರ’

Update: 2018-05-25 19:49 IST

ಮಂಗಳೂರು, ಮೇ 25: ದ.ಕ. ಜಿಲ್ಲೆಯ ಪ್ರಾಥಮಿಕ, ಪ್ರೌಢ, ಪದವಿಪೂರ್ವ ಹಾಗೂ ಕಾಲೇಜು ಮಟ್ಟದಲ್ಲಿ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಕಲಿತು ಕನ್ನಡ ಭಾಷಾ ಪರೀಕ್ಷೆಯಲ್ಲಿ ಶೇ.100ಅಂಕ ಗಳಿಸಿರುವ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಹಾಗೂ ಶೇ.100 ಫಲಿತಾಂಶ ದಾಖಲಿಸಿರುವ ಕನ್ನಡ ಮಾಧ್ಯಮ ಶಾಲೆಗಲನ್ನು ಮತ್ತು ವಿಶ್ವ ವಿದ್ಯಾನಿಲಯ ಮಟ್ಟದಲ್ಲಿ ಪಿಎಚ್‌ಡಿ ಮಾಡಿರುವ ಪ್ರತಿಭಾನ್ವಿತರನ್ನು ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ‘ಪ್ರತಿಭಾ ಪುರಸ್ಕಾರ’ ನೀಡಿ ಗೌರವವಿಸಲಿದೆ.

ಆಸಕ್ತರು ಹೆಸರು, ವಿಳಾಸ ಹಾಗೂ ದೂರವಾಣಿ ಸಂಖ್ಯೆಗಳೊಂದಿಗೆ ಅರ್ಜಿಗಳನ್ನು ವಾಸುದೇವ ರಾವ್ ಕುಡುಪು, ಗೌರವ ಸಂಚಾಲಕರು ‘ಪ್ರತಿಭಾ ಪುರಸ್ಕಾರ’ ವಿಭಾಗ, ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಶ್ರಿಕೃಷ್ಣ ಸಂಕೀರ್ಣ,ಕೋಡಿಯಾಲ್‌ಬೈಲ್, ಮಂಗಳೂರು ಈ ವಿಳಾಸಕ್ಕೆ ಕಳುಹಿಸಿಕೊಡುವಂತೆ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News