ಬೈಕ್‍ಗೆ ಲಾರಿ ಢಿಕ್ಕಿ: ಓರ್ವ ಯುವತಿ ಮೃತ್ಯು, ಸಹ ಸವಾರೆ ಸ್ಥಿತಿ ಗಂಭೀರ
Update: 2018-05-25 21:36 IST
ಮೈಸೂರು,ಮೇ.25: ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಲಾರಿ ಢಿಕ್ಕಿಯಾದ ಪರಿಣಾಮ ಬೈಕ್ ನಲ್ಲಿದ್ದ ಓರ್ವ ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವ ಯುವತಿ ಗಂಭೀರ ಗಾಯಗೊಂಡ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೈಸೂರಿನ ಕೊಲಂಬಿಯಾ ಏಷಿಯಾ ಆಸ್ಪತ್ರೆ ಮುಂಭಾಗದ ರಿಂಗ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಮೃತ ಯುವತಿಯನ್ನು ಸ್ನೇಹ(19) ಎಂದು ಗುರುತಿಸಲಾಗಿದ್ದು, ಪ್ರಕೃತಿ (23)ಗೆ ಗಂಭೀರ ಗಾಯಗಳಾಗಿವೆ. ಪ್ರಕೃತಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಕೊಲಂಬಿಯಾ ಏಷಿಯಾ ಆಸ್ಪತ್ರೆ ಮುಂಭಾಗದ ರಿಂಗ್ ರಸ್ತೆಯಲ್ಲಿ ಸಿಗ್ನಲ್ ದಾಟುತ್ತಿದ್ದ ಸ್ಕೂಟರ್ ಗೆ ಹಿಂಬದಿಯಿಂದ ಬಂದ ಟಿಪ್ಪರ್ ಲಾರಿ ಢಿಕ್ಕಿಯಾಗಿದೆ. ಈ ವೇಳೆ ಸ್ನೇಹ ಸ್ಥಳದಲ್ಲೇ ಸಾವನ್ನಪ್ಪಿದ್ದು, ಪ್ರಕೃತಿಗೆ ಗಂಭೀರ ಗಾಯಗಳಾಗಿವೆ.
ಈ ಕುರಿತು ಎನ್.ಆರ್.ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣದ ದಾಖಲಾಗಿದೆ.