ಸಂಪುಟ ರಚನೆ ಕಸರತ್ತು ಆರಂಭ

Update: 2018-05-25 16:25 GMT

ಬೆಂಗಳೂರು, ಮೇ 25: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಧಾನಸಭೆಯಲ್ಲಿ ವಿಶ್ವಾಸಮತ ಸಾಬೀತುಪಡಿಸಿದ ಬೆನ್ನಲ್ಲೆ ಸಚಿವ ಸಂಪುಟ ವಿಸ್ತರಣೆ ಕಸರತ್ತು ಆರಂಭಿಸಿದ್ದಾರೆ.

ಶುಕ್ರವಾರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರಕಾರಿ ನಿವಾಸ ಕಾವೇರಿಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಸಭೆ ನಡೆಸಿ ಸಂಪುಟ ವಿಸ್ತರಣೆ ಕುರಿತು ಸಮಾಲೋಚನೆ ನಡೆಸಿದರು.

ಈ ಸಭೆಯಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ರಾಜ್ಯ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಮಾಜಿ ಸಚಿವ ಎಚ್.ಡಿ.ರೇವಣ್ಣ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News