ಪಕ್ಷ ವಿರೋಧಿ ಚಟುವಟಿಕೆ ಆರೋಪ; ಮಡಿಕೇರಿ ಬಿಜೆಪಿಯಿಂದ ಐವರ ಅಮಾನತು

Update: 2018-05-26 11:38 GMT

ಮಡಿಕೇರಿ,ಮೇ.26: ಇತ್ತೀಚೆಗೆ ನಡೆದ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿದ್ದ ಅಪ್ಪಚ್ಚು ರಂಜನ್‍ರವರ ಪರವಾಗಿ ಯಾವುದೇ ಸಂಘಟನೆಯಲ್ಲಿ ತೊಡಗಿಸಿಕೊಳ್ಳದೆ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿರುವ ಆರೋಪದ ಹಿನ್ನೆಲೆಯಲ್ಲಿ ಐವರು ಪ್ರಮುಖರನ್ನು ಆರು ವರ್ಷಗಳ ಕಾಲ ಅಮಾನತುಗೊಳಿಸಲಾಗಿದೆ. 

ಈ ಕುರಿತು ಕ್ಷೇತ್ರ ಸಮಿತಿಯ ಅಧ್ಯಕ್ಷರಾದ ಎಮ್.ಎನ್.ಕುಮಾರಪ್ಪ ಪತ್ರಿಕಾ ಪ್ರಕಟಣೆ ನೀಡಿ, ಸೋಮವಾರಪೇಟೆ ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶೀ ಪಿ.ಡಿ.ಮೋಹನ್ ದಾಸ್, ತಾಲೂಕು ಯುವಮೋರ್ಚಾ ಅಧ್ಯಕ್ಷರಾದ ಮಹೇಶ್ ತಿಮ್ಮಯ್ಯ, ಸಾಮಾಜಿಕ ಜಾಲತಾಣ ಘಟಕದ ಅಧ್ಯಕ್ಷ ಬಿ.ಪಿ.ದಿವಾನ್, ವಿವಿದ್ದೋದ್ದೇಶ ಸಹಕಾರ ಸಂಘದ ನಿರ್ದೇಶಕ ಎಂ.ಸಿ.ರಾಘವ, ಬೇಳೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಮಂಜುನಾಥ್‍ರವರನ್ನು ಅಮಾನತ್ತು ಗೊಳಿಸಿದ್ದಾರೆ. 

ಜಿಲ್ಲಾ ಪಂಚಾಯತ್ ಸದಸ್ಯರಾದ ಪೂರ್ಣಿಮ ಗೋಪಾಲ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಹೆಚ್.ಕೆ. ಮಾದಪ್ಪ, ಜಿಲ್ಲಾ ಸಮಿತಿ ಸದಸ್ಯರಾದ ವೆಂಕಪ್ಪ, ರೂಪಾ ಸತೀಶ್, ಡಿ.ಬಿ.ಧರ್ಮಪ್ಪ ಅವರುಗಳನ್ನು ಅಮಾನತು ಗೊಳಿಸುವಂತೆ ರಾಜ್ಯ ಬಿ.ಜೆ.ಪಿ ಅಧ್ಯಕ್ಷರಿಗೆ ಶಿಫಾರಸ್ಸು ಮಾಡಲಾಗಿದೆ ಎಂದು ತಿಳಿಸಿದ್ದಾರೆ.  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News