×
Ad

ಉಡುಪಿ: ಪ.ಜಾತಿ/ಪ.ಪಂಗಡಗಳ ಕುಂದುಕೊರತೆ ನಿವಾರಣಾ ಸಭೆ

Update: 2018-05-26 19:56 IST

ಉಡುಪಿ, ಮೇ 26: ಹೊಸದಿಲ್ಲಿಯ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ, ಕರ್ನಾಟಕ ರಾಜ್ಯದಲ್ಲಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಕ್ಕೆ ಸೇರಿದ ವ್ಯಕ್ತಿಗಳ ಸಮಸ್ಯೆ ಮತ್ತು ಕುಂದುಕೊರತೆಗಳ ಬಗ್ಗೆ ಜುಲೈ 26 ಹಾಗೂ 27 ರಂದು ಬೆಂಗಳೂರು ನಗರದಲ್ಲಿ ಕುಂದುಕೊರತೆ ನಿವಾರಣಾ ಸಬೆಯನ್ನು ನಡೆಸಲು ತೀರ್ಮಾನಿಸಿದೆ.

 ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಕ್ಕೆ ಸೇರಿದ ವ್ಯಕ್ತಿಗಳ ಮೇಲೆ ಸರಕಾರಿ ನೌಕರರು ದೌರ್ಜನ್ಯವೆಸಗಿದ ಬಗ್ಗೆ ಹಾಗೂ ಸರಕಾರಿ ನೌಕರರ ನಿರ್ಲಕ್ಷ್ಯದಿಂದ ದೌರ್ಜನ್ಯಕ್ಕೊಳಗಾದ ಬಗ್ಗೆ ದೂರುಗಳಿದ್ದಲ್ಲಿ, ತಮ್ಮ ದೂರುಗಳನ್ನು, ರಿಜಿಸ್ಟ್ರಾರ್, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ, ಮಾನವ ಅಧಿಕಾರ ಭವನ, ಬ್ಲಾಕ್-ಸಿ, ಜಿಪಿಓ ಕಾಂಪ್ಲೆಕ್ಸ್, ಐಎನ್‌ಎ, ನವದೆಹಲಿ-110023 ಇಲ್ಲಿಗೆ ನೊಂದಾಯಿತ ಅಂಚೆ ಅಥವಾ ಸ್ಪೀಡ್ ಪೋಸ್ಟ್ ಮೂಲಕ ಜೂನ್ 10ರೊಳಗೆ ತಲುಪುವಂತೆ ಸಲ್ಲಿಸಬಹುದು. ಆಯೋಗದ ಇ-ಮೇಲ್ ವಿಳಾಸ -jrlawnhrc@nic.in-  ಗೆ ಅಥವಾ ಫ್ಯಾಕ್ಸ್‌ನಂ.: 011-24651334 ಮೂಲಕ ಸಹ ಕಳುಹಿಸಬಹುದಾಗಿದೆ. ದೂರುದಾರರು ಸಂಪರ್ಕಕ್ಕಾಗಿ ತಮ್ಮ ದೂರವಾಣಿ ಸಂಖ್ಯೆ ಅಥವಾ ಇ-ಮೇಲ್ ವಿಳಾಸವನ್ನು ನಮೂದಿಸಬೇಕು. ಈ ಕುರಿತ ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಉಡುಪಿ ಇವರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News