×
Ad

ತರೀಕೆರೆ: ಕಾರಿಗೆ ಅಪರಿಚಿತ ವಾಹನ ಢಿಕ್ಕಿ; ದಂಪತಿಗೆ ಗಂಭೀರ ಗಾಯ

Update: 2018-05-26 20:03 IST

ತರೀಕೆರೆ, ಮೇ 26: ಪಟ್ಟಣದ ಸಮೀಪದಲ್ಲಿರುವ ಕಟ್ಟೆಹೊಳೆ ಕ್ರಾಸ್ ಬಳಿ ಕಾರಿಗೆ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ದಂಪತಿಗಳಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

ಶುಕ್ರವಾರ ಮಧ್ಯಾಹ್ನ ಸುಮಾರು 2 ಗಂಟೆ ವೇಳೆ ಶಿವಮೊಗ್ಗ ಮಾರ್ಗವಾಗಿ ಹೋಗುತ್ತಿದ್ದ ಕಾರಿಗೆ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದು ಪರಾರಿಯಾಗಿದೆ. ಈ ಅಪಘಾತದಿಂದಾಗಿ ಕಾರಿನಲ್ಲಿದ್ದ ಶಿವಮೊಗ್ಗ ಮೂಲದ ದಂಪತಿಗಳಾದ ಪಲ್ಲವಿ ಹೆಗ್ಡೆ (30) ಹಾಗೂ ನವೀನ್ ಹೆಗ್ಡೆ (35) ಗಂಭಿರವಾಗಿ ಗಾಯಗೊಂಡಿದ್ದು, ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಟ್ಟಣ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News