ಬಂಟ್ವಾಳ: ಬಸ್ ಢಿಕ್ಕಿ- ಸ್ಕೂಟರ್ ಸವಾರನಿಗೆ ಗಾಯ
Update: 2018-05-26 20:55 IST
ಬಂಟ್ವಾಳ, ಮೇ 26: ಖಾಸಗಿ ಬಸ್ಸೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಛಿದ್ರಗೊಂಡು ಸವಾರ ಗಾಯಗೊಂಡ ಘಟನೆ ವಿಟ್ಲ-ಪುತ್ತೂರು ರಸ್ತೆಯ ಚಂದಳಿಕೆ ಎಂಬಲ್ಲಿ ಶನಿವಾರ ನಡೆದಿದೆ.
ವಿಟ್ಲ ಕಡೆಯಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ಚಂದಳಿಕೆ ಎಂಬಲ್ಲಿ ಎದುರಿನಿಂದ ಬರುತ್ತಿದ್ದ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದಿದೆ. ಪರಿಣಾಮ ದ್ವಿಚಕ್ರ ವಾಹನ ಬಸ್‌ನ ಮುಂಭಾಗದ ಚಕ್ರದಡಿಯಲ್ಲಿ ಸಿಕ್ಕಿಹಾಕೊಂಡು ಛಿದ್ರಗೊಂಡಿದೆ.
ಅಪಘಾತ ಸಂಭವಿಸುತ್ತಿದ್ದಂತೆಯೇ ದ್ವಿಚಕ್ರ ಸವಾರನು ಸಮಯ ಪ್ರಜ್ಞೆಯಿಂದ ರಸ್ತೆಯ ಪಕ್ಕಕ್ಕೆ ಹಾರಿ ಪ್ರಾಣ ಉಳಿಸಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.